ಹೊಸ ಗೆಟಪ್‌ನಲ್ಲಿ ಪ್ರಭಾಸ್- ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ಔಟ್

Public TV
1 Min Read
prabhas

‘ಕಲ್ಕಿ 2898 ಎಡಿ’ (Kalki 2898 AD) ಚಿತ್ರದ ಸಕ್ಸಸ್ ನಂತರ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಮೂಲಕ ಪ್ರಭಾಸ್ ಗಮನ ಸೆಳೆಯುತ್ತಿದ್ದಾರೆ. ಇಂದು (ಅ.23) ನಟನ ಹುಟ್ಟುಹಬ್ಬದಂದೇ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ಕೊಟ್ಟಿದೆ. ಪ್ರಭಾಸ್ ಎಂದೂ ಕಾಣಿಸಿಕೊಂಡಿರದ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ.

prabhas 1 3ಪ್ರಭಾಸ್ ಹುಟ್ಟುಹಬ್ಬದ ದಿನವೇ ಮುಂದಿನ ಸಿನಿಮಾದ ಕ್ರೇಜಿ ಅಪ್‌ಡೇಟ್‌ವೊಂದು ಸಿಕ್ಕಿದೆ. ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಸಿಗಾರ್ ಬಾಯಲ್ಲಿ ಇಟ್ಟುಕೊಂಡು ರಾಯಲ್ ಆಗಿ ಪ್ರಭಾಸ್ ಪೋಸ್ ಕೊಟ್ಟಿದ್ದಾರೆ. ನಟನ ಖಡಕ್ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಮುಂದಿನ ವರ್ಷ ಏಪ್ರಿಲ್ 10ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:2ನೇ ಮದುವೆಗೆ ಸಜ್ಜಾದ ‘ಜೊತೆ ಜೊತೆಯಲಿ’ ನಟಿ ಮಾನಸ ಮನೋಹರ್‌

 

View this post on Instagram

 

A post shared by Prabhas (@actorprabhas)

ಇನ್ನೂ ಇತ್ತೀಚೆಗೆ ‘ದಿ ರಾಜಾ ಸಾಬ್’ ಸಿನಿಮಾ ಮೊದಲ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಅದರಲ್ಲಿ ಪ್ರಭಾಸ್ ಲವರ್ ಬಾಯ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಈಗ ಬಿಟ್ಟಿರುವ ಪೋಸ್ಟರ್‌ನಲ್ಲಿ ನಟ ಖಡಕ್ ಆಗಿ ಕಾಣಿಸಿಕೊಂಡಿರೋದು ಫ್ಯಾನ್ಸ್‌ಗೆ ಚಿತ್ರದ ಕುರಿತು ಕುತೂಹಲ ಮೂಡಿಸಿದೆ.

ಇನ್ನೂ ಈ ಚಿತ್ರದಲ್ಲಿ ಪ್ರಭಾಸ್ ಜೊತೆ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್, ರಿದ್ಧಿ ಕುಮಾರ್ ನಟಿಸಿದ್ದಾರೆ. ಸಂಜಯ್ ದತ್, ಅನುಪಮ್ ಖೇರ್, ವರಲಕ್ಷ್ಮಿ ಶರತ್‌ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರಕ್ಕೆ ಮಾರುತಿ ನಿರ್ದೇಶನ ಮಾಡಿದ್ದಾರೆ.

Share This Article