ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶನದ ಮಾಫಿಯಾ ಸಿನಿಮಾದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿದ್ದಾರೆ. ಇದೀಗ ‘ಮಾಫಿಯಾ’ ಚಿತ್ರತಂಡದಿಂದ ಟೀಸರ್ ಬಿಡುಗಡೆಯಾಗಿದೆ. ಪ್ರಜ್ವಲ್ ಹುಟ್ಟುಹಬ್ಬಕ್ಕೆ (ಜು.4) ಚಿತ್ರದ ಟೀಸರ್ ರಿಲೀಸ್ ಮಾಡಿ ವಿಶೇಷವಾಗಿ ಚಿತ್ರತಂಡ ಶುಭಕೋರಿದೆ. ಇದನ್ನೂ ಓದಿ:ರಾಜ್ ಬಿ ಶೆಟ್ಟಿ ಜೊತೆ ಕೈಜೋಡಿಸಿದ ನಟಿ- ‘ರೂಪಾಂತರ’ ಚಿತ್ರದಲ್ಲಿ ಚೈತ್ರಾ
‘ಮಾಫಿಯಾ’ ಸಿನಿಮಾ ಟೀಸರ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಎಂದೂ ಕಾಣಿಸಿಕೊಂಡಿರದ ಡಿಫರೆಂಟ್ ರೋಲ್‌ನಲ್ಲಿ ಪ್ರಜ್ವಲ್ ನಟಿಸಿದ್ದಾರೆ. ಅಂದಹಾಗೆ, ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಬಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ (Aditi Prabhudeva), ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ (Shine Shetty), ವಿಜಯ್ ಚೆಂಡೂರ್, ವಾಸುಕಿ ವೈಭವ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಅಂದಹಾಗೆ, ರಾಕ್ಷಸ, ಗಣ, ಕರಾವಳಿ ಜೊತೆ ಮಾಫಿಯಾ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ಪ್ರಜಲ್ ದೇವರಾಜ್ ಕೈಯಲ್ಲಿವೆ. ಈ ವರ್ಷ ಒಂದೊಂದೇ ಸಿನಿಮಾ ರಿಲೀಸ್ ಆಗಲಿದೆ.