ಶೃತಿ ಹರಿಹರನ್ ಪರ ಬ್ಯಾಟ್ ಬೀಸಿದ ಬಹುಭಾಷಾ ನಟ ಪ್ರಕಾಶ್ ರೈ!

Public TV
3 Min Read
prakash raj collage

ಬೆಂಗಳೂರು: #MeToo ಅಭಿಯಾನದ ಅಡಿಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರೈ ಅವರು ಶೃತಿ ಪರ ಬ್ಯಾಟ್ ಬೀಸಿದ್ದಾರೆ.

ಶೃತಿ ಆರೋಪದ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ರೈ, “ಶ್ರುತಿ ಹರಿಹರನ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತೆ ದಿಟ್ಟ ಹೆಣ್ಣು. ಅರ್ಜುನ್ ಸರ್ಜಾ ಅವರು ಕನ್ನಡದ ಹೆಮ್ಮೆ. ಹಿರಿಯ ನಟರೂ ಎಂಬುದನ್ನೂ ಮರೆಯದಿರೋಣ. ಆದರೆ ಶೃತಿಯವರ ಆರೋಪದ ಹಿನ್ನೆಲೆಯಲ್ಲಿ ಆ ಹೆಣ್ಣು ಅನುಭವಿಸಿದ ಅಸಹಾಯಕತೆ, ಅವಮಾನ, ಇಷ್ಟು ದಿನಗಳ ಕಾಲ ತನ್ನೊಳಗೆ ಹುದುಗಿಸಿಟ್ಟ ಆ ಗಾಯದ ನೋವನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಅರ್ಜುನ್ ಅವರು ಈ ಆರೋಪವನ್ನು ಅಲ್ಲಗಳೆದರೂ ಅವರ ಆ ದಿನದ ವರ್ತನೆ ಆಕೆಯಲ್ಲಿ ಉಂಟು ಮಾಡಿದ ನೋವಿಗಾಗಿ ಕ್ಷಮೆ ಕೇಳುವುದು ದೊಡ್ಡತನದ ಲಕ್ಷಣ” ಎಂದು ಹೇಳಿದ್ದಾರೆ. ಇದನ್ನೂ ಓದಿ: #MeeToo- ನಟಿ ಶೃತಿ ಹರಿಹರನ್ ಬೆನ್ನಿಗೆ ನಿಂತ ಶ್ರದ್ಧಾ ಶ್ರೀನಾಥ್!

shruthi hariharan

prakash raj

ಶೃತಿ ಹರಿಹರನ್ ಆರೋಪವೇನು?:
ಮ್ಯಾಗಜೀನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಬಿಚ್ಚಿಟ್ಟಿದ್ದರು. ಕಳೆದ ವರ್ಷ `ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ `ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ `ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದರು.  ಇದನ್ನೂ ಓದಿ: ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು: ಫಿಲ್ಮಂ ಚೇಂಬರ್ ಅಧ್ಯಕ್ಷ ಚೆನ್ನೇಗೌಡ

Sruthi Arjun 1

ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. `ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ `ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. `ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://youtu.be/y8BB_452KJE

https://www.youtube.com/watch?v=VJ3BO-m7Y5Q

https://www.youtube.com/watch?v=OT35pZGgGtY

https://www.youtube.com/watch?v=mbR4z3LEx00

https://www.youtube.com/watch?v=Pvb9crCfEe4

Share This Article
Leave a Comment

Leave a Reply

Your email address will not be published. Required fields are marked *