ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲಿ 12 ಕೇತ್ರದಲ್ಲಿ ಬಿಜೆಪಿ ಜಯಗಳಿಸಿದ್ದು, ಈ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.
ಉಪಚುನಾವಣೆಯ ಫಲಿತಾಂಶ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕಕ್ಕೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಬೆನ್ನಿಗೆ ಚೂರಿ ಹಾಕಿದವರು ಮತ್ತೆ ಅಧಿಕಾರಕ್ಕೆ ಬಂದರು. ಆದರೆ ಇದು ಹೆಚ್ಚು ದಿನ ಮುಂದುವರಿಯಲ್ಲ ಅನ್ನೋ ನಂಬಿಕೆ ಇದೆ ಎಂದಿದ್ದಾರೆ.
Advertisement
ಅಲ್ಲದೆ ಅನರ್ಹರಿಗೆ ಮಣೆ ಹಾಕಿದ್ದೀರಿ. ಒಳಿತಾಗಲಿ, ”ಮಾಡಿದ್ದುಣ್ಣೋ ಮಾರಾಯ” ಈ ಮಾತು ಯಾರಿಗೆ ಅನ್ವಯಿಸುತ್ತೋ ಕಾದು ನೋಡೋಣ ಎಂದು ಬರೆದುಕೊಂಡು ಹ್ಯಾಶ್ ಟ್ಯಾಗ್ ಬಳಸಿ ಜಸ್ಟ್ ಆಸ್ಕಿಂಗ್ ಎಂದು ಹೇಳಿದ್ದಾರೆ.
Advertisement
BY ELECTION RESULTS
congratulations KARNATAKA
BACK STABBERS back in action.
HOPE it doesn’t BACKFIRE ..ಅನರ್ಹರಿಗೆ ಮಣೆ ಹಾಕಿದ್ದೀರಿ…ಒಳಿತಾಗಲಿ…””ಮಾಡಿದ್ದುಣ್ಣೊ ಮಾರಾಯ””ಈ ಮಾತು ಯಾರಿಗೆ ಅನ್ವಯಿಸುತ್ತೊ ಕಾದು ನೊಡೋಣ ..#JustAsking
— Prakash Raj (@prakashraaj) December 9, 2019
Advertisement
ಈ ಹಿಂದೆ ಅನರ್ಹ ಶಾಸಕರ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದ್ದ ಪ್ರಕಾಶ್ ರಾಜ್, `ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು’ ಎನ್ನುವ ತೀರ್ಪಿನ ಆಶೀರ್ವಾದ ಪಡೆದುಕೊಂಡು `ತೃಪ್ತ’ ಶಾಸಕರು ಕೊಂಕಣ ಸುತ್ಕೊಂಡು ಮೈಲಾರಕ್ಕೆ ಬಂದಿವೆ. ಒಳ್ಳೇದೆ ಆಯ್ತು, ಸ್ವಾಭಿಮಾನಿ ಕನ್ನಡಿಗರೇ ಇವುಗಳು ಜನ್ಮ ಜನ್ಮಕ್ಕೂ ಮರೆಯದೆ ಇರುವ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ಬರೆದುಕೊಂಡಿದ್ದರು.
Advertisement
ಸುಪ್ರೀಂಕೋರ್ಟ್ ನಲ್ಲಿ ಗೆದ್ದು ಬೀಗುತ್ತಿರುವ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಬೇಕು. ಈ ಮೂಲಕ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಪ್ರಕಾಶ್ ರಾಜ್ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದರು.
“ಹಾವೂ ಸಾಯ್ಬಾರ್ದು..ಕೋಲೂ ಮುರೀಬಾರ್ದು “ಎನ್ನುವ ತೀರ್ಪಿನ ಆಶೀರ್ವಾದ ಪಡಕೊಂಡು “ತ್ರಪ್ತ”ಶಾಸಕರು ..ಕೊಂಕಣ ಸುತ್ಕೊಂಡು ಮ್ಯಲಾರಕ್ ಬಂದವೆ ..ಓಳ್ಳೇದೆ ಆಯ್ತು ..ಸ್ವಾಭಿಮಾನಿ ಕನ್ನಡಿಗರೆ .. ಇವುಗಳು ..ಜನ್ಮ ಜನ್ಮಕ್ಕೂ ಮರೀದೆ ಇರೋ ತೀರ್ಪು ಕೊಡೋದು ಈಗ ನಮ್ಮ ಜವಾಬ್ದಾರಿ ..#justAsking
— Prakash Raj (@prakashraaj) November 13, 2019
ಸಿದ್ದರಾಮಯ್ಯ, ದಿನೇಶ್ ರಾಜೀನಾಮೆ:
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೆಡವಲು ಕಾರಣರಾದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದೆ. ಇದರ ಫಲಿತಾಂಶ ಇಂದು ಹೊರ ಬಿದ್ದಿದ್ದು, 12 ಕಡೆಗಳಲ್ಲಿ ಕಮಲ ಅರಳಿದೆ. ಅದರಲ್ಲಿಯೂ ಜೆಡಿಎಸ್ ಭದ್ರ ಕೋಟೆಯಾಗಿದ್ದ ಮಂಡ್ಯದ ಕೆಆರ್ ಪೇಟೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಜಯಗಳಿಸಿರುವುದು ಅಚ್ಚರಿ ಮೂಡಿಸಿದೆ. ಹುಣಸೂರು ಹಾಗೂ ಶಿವಾಜಿನಗರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ್ದು, ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಜಯಗಳಿಸಿದ್ದಾರೆ.
ಚುನಾಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ.