ಚೂರಿಕಟ್ಟೆ ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಾಯಕನಾಗಿ ನಟಿಸಿರುವ ಪ್ರವೀಣ್ ತೇಜ (Praveen Tej) ಮೇಲೆ ಹಲ್ಲೆಯಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಮ್ಮ ಮೇಲೆ ದಿಲೀಪ್ (Dileep) ಎನ್ನುವವ ಹಲ್ಲೆ ಮಾಡಿ, ದುಬಾರಿ ಕಾರಿನ ಗಾಜನ್ನು ಪುಡಿ ಪುಡಿ ಮಾಡಿದ್ದಾನೆ. ಜೊತೆಗೆ ತಮ್ಮ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಪ್ರವೀಣ್ ಕೋಣನಕುಂಟೆ (Konanakunte) ಠಾಣೆಗೆ (Police) ದೂರು (Complaint) ನೀಡಿದ್ದಾರೆ. ದಿಲೀಪ್ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
Advertisement
ಫೆಬ್ರವರಿ 12 ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಗೆಳೆಯನ ಅಪಾರ್ಟ್ ಮೆಂಟ್ ನಲ್ಲಿ ನಡೆಯುತ್ತಿದ್ದ ಹುಟ್ಟು ಹಬ್ಬದಲ್ಲಿ ಪ್ರವೀಣ್ ಪಾಲ್ಗೊಂಡಿದ್ದಾರೆ. ಈ ಸಮಯದಲ್ಲಿ ದಿಲೀಪ್ ಎಂಬ ಪರಿಚಿತನೊಬ್ಬನಿಂದ ಗಲಾಟೆ ಶುರುವಾಗಿದೆ. ಪ್ರವೀಣ್ ಅವರ ವೃತ್ತಿಯ ಬಗ್ಗೆ ದಿಲೀಪ್ ಕೆಟ್ಟದ್ದಾಗಿ ಮಾತನಾಡಿದ್ದಾನಂತೆ. ಮಾತಿಗೆ ಮಾತು ಬೆಳೆದು ಅದು ಹೊಡೆದಾಟದ ಹಂತಕ್ಕೆ ತಲುಪಿದೆ. ಪ್ರವೀಣ್ ಮೇಲೆ ದೈಹಿಕ ಹಲ್ಲೆಯಾಗಿದ್ದು, ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ ಎಂದು ದೂರಿನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್
Advertisement
Advertisement
ಘಟನೆಯಿಂದ ನೊಂದಿದ್ದ ಪ್ರವೀಣ್ ಆ ರಾತ್ರಿ ಅದೇ ಅಪಾರ್ಟ್ ಮೆಂಟ್ ನಲ್ಲಿ ಉಳಿದುಕೊಂಡಿದ್ದಾರೆ. ಬೆಳಗ್ಗೆ ಮನೆಗೆ ಹೊರಡಲು ಕಾರು ಬಳಿ ಬಂದರೆ ಕಾರಿನ ಗ್ಲಾಸ್ ಗಳನ್ನು ಹೊಡೆದು ಹಾಕಲಾಗಿತ್ತು. ಸಿಸಿ ಟಿವಿ ಪರಿಶೀಲನೆ ಮಾಡಿದಾಗ ದಿಲೀಪ್ ಅವರೇ ಕಾರಿನ ಗಾಜು ಒಡೆದಿದ್ದಾರೆ ಎನ್ನುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Advertisement
‘ಹೊಂದಿಸಿ ಬರೆಯಿರಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರವೀಣ್ ತೇಜ್, ಈವರೆಗೂ ಯಾವುದೇ ಗಲಾಟೆ ಅಥವಾ ಗಾಸಿಪ್ ಗಳಲ್ಲಿ ಕಾಣಿಸಿಕೊಂಡಿಲ್ಲ. ಇದೇ ಮೊದಲ ಬಾರಿಗೆ ಅವರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್, ಸೂಕ್ತ ಕ್ರಮದ ಭರವಸೆ ನೀಡಿದ್ದಾರಂತೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
This article opened my eyes, I can feel your mood, your thoughts, it seems very wonderful. I hope to see more articles like this. thanks for sharing.