ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪ್ರಿಯಾಂಕಾ ಚಿಂಚೋಳಿ ಪತಿ ರಾಕೇಶ್ ಜೊತೆಗೆ ಹನಿಮೂನ್‍ಗೆ ಹಾರಿದ್ದಾರೆ.
ಕಳೆದ ವಾರವಷ್ಟೇ ಕುಟುಂಬದವರ ಸಮ್ಮುಖದಲ್ಲಿ ರಾಕೇಶ್ ಜೊತೆಗೆ ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಂಕಾ ಚಿಂಚೋಳಿ ಇದೀಗ ಪತಿ ಜೊತೆಗೆ ಮಾಲ್ಡೀವ್ಸ್‌ಗೆ ಹನಿಮೂನ್‍ಗೆ ಹಾರಿದ್ದಾರೆ. ಪತಿ ಜೊತೆಗೆ ಏಕಾಂತವಾಗಿ ಕಾಲ ಕಳೆಯುತ್ತಿರುವ ಅವರು, ಮಾಲ್ಡೀವ್ಸ್‌ನ ಕಡಲ ತೀರದಲ್ಲಿ ಎಂಜಾಯ್ ಮಾಡುತ್ತಿರುವ ವೀಡಿಯೋ, ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಮಾಲ್ಡೀವ್ಸ್‌ನ ಕಡಲ ತೀರದ ದೃಶ್ಯ, ಏರ್‌ಪೋರ್ಟ್, ಮೂನ್ ಲೈಟ್ ಕೆಳಗೆ ಡಿನ್ನರ್ ಮಾಡುತ್ತಿರುವ ದೃಶ್ಯ ಸೇರಿದಂತೆ ಹಲವಾರು ಫೋಟೋಗಳನ್ನು ಇನ್‍ಸ್ಟಾ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದ ನಟಿ ಪ್ರಿಯಾಂಕಾ ಚಿಂಚೋಳಿ
View this post on Instagram
ಕಳೆದ ಫೆಬ್ರವರಿ 14 ರಂದು ಪ್ರೇಮಿಗಳ ದಿನಾಚರಣೆಯಂದು ರಾಕೇಶ್ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪ್ರಿಯಾಂಕಾ ಚಿಂಚೋಳಿ, ಆಗಸ್ಟ್ 14ರಂದು ಸರಳವಾಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದರು. ನಂತರ ಅಮೇರಿಕಾದಿಂದ ಮದುವೆಗಾಗಿ ಭಾರತಕ್ಕೆ ಬಂದ ರಾಕೇಶ್ ಜೊತೆಗೆ ಡಿಸೆಂಬರ್ 10-11ರಂದು ಕುಟುಂಬ ಮತ್ತು ಆಪ್ತರ ಸಮ್ಮುಖದಲ್ಲಿ ಸಂಪ್ರದಾಯಿಕವಾಗಿ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರು. ಇದನ್ನೂ ಓದಿ: ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ ನಟಿ ಪ್ರಿಯಾಂಕಾ ಚಿಂಚೋಳಿ
ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹರ ಹರ ಮಹಾದೇವ ಧಾರವಾಹಿಯಲ್ಲಿ ಸೀತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪ್ರಸ್ತುತ ಮತ್ತೊಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೈ ಹನುಮಾನ್ ಮತ್ತು ಮನಸಾರೆ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ ಜೊತೆಗೆ ರಾಗ ಎಂಬ ಧಾರವಾಹಿಯಲ್ಲಿ ಕೂಡ ನಟಿಸುತ್ತಿದ್ದಾರೆ.