CinemaLatestLeading NewsMain PostSouth cinema
ಅತ್ಯಾಚಾರ ಪ್ರಕರಣ: ಮಾಲಿವುಡ್ ನಟ ವಿಜಯ್ ಬಾಬು ಬಂಧನ

Advertisements
ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಮಾಲಿವುಡ್ ನಟ ಕಮ್ ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಿದ್ದಾರೆ. ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳ ಪೊಲೀಸರು ಇಂದು ವಿಜಯ್ ಬಾಬು ಅವರನ್ನು ಬಂಧಿಸಿದ್ದಾರೆ.
ನಟ ವಿಜಯ್ ಬಾಬು ಅವರನ್ನು ಬಂಧಿಸಿರುವ ಪೊಲೀಸರು ಜುಲೈ 3ರವೆರೆಗೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಕಳೆದ ವಾರ ವಿಜಯ್‌ಗೆ ನಿರೀಕ್ಷಣ ಜಾಮೀನು ನೀಡಿತ್ತು. ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಯುವನಟಿಯ ಫೋಟೋವನ್ನು ವಿಜಯ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇದರ ವಿರುದ್ಧ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:ಅಂಡರ್ ವರ್ಲ್ಡ್ ನಿಂದಾಗಿ ಬಾಲಿವುಡ್ ನಟಿ ಸೋನಾಲಿ ಬೇಂದ್ರೆಗೆ ಹಿನ್ನೆಡೆ
ಇದೀಗ ಸೋಮವಾರ ಜುಲೈ 3ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿಚಾರಣೆ ನಡೆಸಲು ತನಿಖಾ ತಂಡಕ್ಕೆ ವಿಚಾರಣೆಗೆ ಅನುಮತಿ ನೀಡಲಾಗಿದೆ. ಇನ್ನು ವಿಚಾರಣೆಯ ನಂತರ ಅಸಲಿ ಸತ್ಯವೇನು ಎಂಬುದನ್ನ ಕಾದುನೋಡಬೇಕಿದೆ.
Live Tv