ಕನ್ನಡದ ನಟಿ, ಬಾಲಿವುಡ್ ಬೆಡಗಿ ಕೃತಿ ಕರಬಂಧ (Kriti Kharbanda) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬಹುಕಾಲದ ಗೆಳೆಯ ಪುಲ್ಕಿತ್ ಸಾಮ್ರಾಟ್ (Pulkit Samrat) ಜೊತೆ ಕೃತಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಾಗಾದ್ರೆ ಕೃತಿ ಯಾವಾಗ, ಎಲ್ಲಿ? ಇಲ್ಲಿದೆ ಮಾಹಿತಿ.
‘ಗೂಗ್ಲಿ’ ಬೆಡಗಿ ಕೃತಿ ಜೊತೆ ಪುಲ್ಕಿತ್ ಇದೇ ಮಾರ್ಚ್ 15ರಂದು ದೆಹಲಿಯಲ್ಲಿ ಗ್ರ‍್ಯಾಂಡ್ ಆಗಿ ಮದುವೆ (Wedding) ಆಗುತ್ತಿದ್ದಾರೆ. ಈ ಜೋಡಿ ತಮ್ಮ ಆಪ್ತರಿಗೆ, ಬಾಲಿವುಡ್‌ನ ನಟ-ನಟಿಯರಿಗೆ ಆಮಂತ್ರಣ ನೀಡಿದ್ದಾರೆ.
ಈಗ ಈ ಜೋಡಿ ಮದುವೆ ಆಗುತ್ತಿರುವ ಸ್ಥಳದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಸುಮಾರು 300 ಎಕರೆಯಲ್ಲಿ ನಿರ್ಮಾಣಗೊಂಡಿರುವ ರೆಸಾರ್ಟ್‌ನಲ್ಲಿ ಕೃತಿ ಮದುವೆಯಾಗುತ್ತಿದ್ದಾರೆ. ಮಾರ್ಚ್ 13ರಿಂದ ಮಾರ್ಚ್ 16ರವರೆಗೆ ಮದುವೆ ಶಾಸ್ತ್ರಗಳು ನಡೆಯಲಿದೆ. ಮಾರ್ಚ್ 15ರಂದು ಹೊಸ ಬಾಳಿಗೆ ಕಾಲಿಡಲಿದ್ದಾರೆ. ಇದನ್ನೂ ಓದಿ:Bigg Boss: ತೆಲುಗು ನಿರ್ದೇಶಕ ಸೂರ್ಯ ಕಿರಣ್ ನಿಧನ
‘ಗೂಗ್ಲಿ’ ಬ್ಯೂಟಿ ಕೃತಿ ಕರಬಂಧ ಹಾಗೂ ಪುಲ್ಕಿತ್ ಸಮರ್ಥ್ ದೆಹಲಿಯಲ್ಲಿರುವ ಐಟಿಸಿ ಗ್ರ‍್ಯಾಂಡ್ ಐಷಾರಾಮಿ ರೆಸಾರ್ಟ್‌ನಲ್ಲಿ ಮದುವೆ ಆಗುತ್ತಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಈ ರೆಸಾರ್ಟ್ 300 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದೆ. ಪ್ರಾಚೀನ ಶೈಲಿಯಲ್ಲಿ ಸುಂದರವಾದ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ.
ಗ್ರ‍್ಯಾಂಡ್ ಭಾರತ್ ರೆಸಾರ್ಟ್‌ನಲ್ಲಿ ಸುಮಾರು 4 ಪ್ರೆಸಿಡೆಂನ್ಸಿಯಲ್ ವಿಲ್ಲಾವಿದೆ. ಐಷಾರಾಮಿ ಸ್ಪಾಗಳು ಸೇರಿದಂತೆ ಅನೇಕ ಸೌಲಭ್ಯಗಳಿವೆ. ಇನ್ನೂ ಕೃತಿ, ಪುಲ್ಕಿತ್ ಇಬ್ಬರೂ ದೆಹಲಿಯಲ್ಲೇ ಹುಟ್ಟಿ ಬೆಳೆದಿದ್ದಾರೆ. ಇವರ ಕುಟುಂಬ ದೆಹಲಿಯಲ್ಲಿಯೇ ನೆಲೆಸಿರುವುದರಿಂದ ಇದೇ ಸೂಕ್ತ ಆಯ್ಕೆ ಎಂದು ಜೋಡಿ ನಿರ್ಧರಿಸಿದೆ.
2019ರಲ್ಲಿ ತೆರೆಕಂಡ ‘ಪಾಗಲ್‌ಪಂತಿ’ ಸಿನಿಮಾದಲ್ಲಿ ಪುಲ್ಕಿತ್ ಸಾಮ್ರಾಟ್, ಕೃತಿ ಜೋಡಿಯಾಗಿ ನಟಿಸಿದ್ದರು. ಈ ವೇಳೆ, ಇಬ್ಬರ ಪರಿಚಯವಾಗಿತ್ತು. ಈ ಪರಿಚಯ ಪ್ರೀತಿಗೆ ತಿರುಗಿದೆ. ಹಲವು ವರ್ಷಗಳ ಡೇಟಿಂಗ್ ನಂತರ ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಈ ಜೋಡಿ ಮದುವೆಯಾಗುತ್ತಿದ್ದಾರೆ.