ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸುತ್ತಿರುವ `ಪಡ್ಡೆಹುಲಿ’ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.
ಬೆಂಗಳೂರಿನ ಬನಶಂಕರಿ ಬಳಿಯ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಾಲಯದಲ್ಲಿ `ಪಡ್ಡೆಹುಲಿ’ ಚಿತ್ರದ ಶುಭ ಮುಹೂರ್ತ ನಡೆಯಿತು. `ರಾಜಹುಲಿ’, `ಜಾನ್ ಜಾನಿ ಜನಾರ್ದನ್’ ಹಾಗೂ `ಸಂಹಾರ’ ಖ್ಯಾತಿಯ ಗುರು ದೇಶ್ಪಾಂಡೆ ಕಲ್ಪನೆಯಲ್ಲಿ ಚಿತ್ರ ಮೂಡಿಬರಲಿದೆ. ಚಿತ್ರದಲ್ಲಿ ಶ್ರೇಯಸ್ ಗೆ ಜೊತೆಯಾಗಿ ನಿಶ್ವಿಕಾ ನಟಿಸಲಿದ್ದಾರೆ. ಇದನ್ನೂ ಓದಿ: ಪಡ್ಡೆಹುಲಿ ನಾಯಕಿ ನಿಶ್ವಿಕಾ ಯಾರು ಗೊತ್ತೆ?
Advertisement
Advertisement
ಮುಹೂರ್ತ ಸಮಾರಂಭದಲ್ಲಿ ಭಾಗಿಯಾದ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಹಾಗೂ ಕಿಚ್ಚ ಸುದೀಪ್ ಈ ಚಿತ್ರಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು. ಕಿಚ್ಚ ಸುದೀಪ್ ಕ್ಲಾಪ್ ಮಾಡಿ ಶುಭಾಶಯ ತಿಳಿಸಿದರೆ, ಪುನೀತ್ ರಾಜ್ಕುಮಾರ್ ಕ್ಯಾಮೆರಾ ಚಾಲನೆ ಮಾಡಿ ಶುಭ ಹಾರೈಸಿದ್ರು. ಇದನ್ನೂ ಓದಿ: ಪಡ್ಡೆ ಹುಲಿಯ ಫಸ್ಟ್ ಲುಕ್ ರಿಲೀಸ್ ಮಾಡಿದ ಹೆಬ್ಬುಲಿ ಹೀಗಂದ್ರು!
Advertisement
ನಿರ್ಮಾಪಕ ಕೆ. ಮಂಜು ಅವರ ಆರಾಧ್ಯ ದೈವ ಸಾಹಸ ಸಿಂಹ ವಿಷ್ಣುವರ್ಧನ್ ಮಡದಿ ಭಾರತಿ ವಿಷ್ಣುವರ್ಧನ್ ದೀಪ ಹಚ್ಚಿ ಚಿತ್ರತಂಡಕ್ಕೆ ಶುಭಸಂದೇಶ ಕೊಟ್ಟರು. ಚಿತ್ರರಂಗದ ಅನೇಕ ಗಣ್ಯರು ಪಡ್ಡೆಹುಲಿ ಚಿತ್ರದ ಮುಹೂರ್ತಕ್ಕೆ ಸಾಕ್ಷಿಯಾದರು. ಇದನ್ನೂ ಓದಿ: ಡ್ಯೂಪ್ ಗಳಿಲ್ಲದೇ ಬೆಂಕಿಯಲ್ಲಿ ಫೋಟೋ ಶೂಟ್ ಮಾಡಿದ ಪಡ್ಡೆ ಹುಲಿ ಶ್ರೇಯಸ್! ಫೋಟೋಗಳಲ್ಲಿ ನೋಡಿ
Advertisement