Advertisements

ಅಪ್ಪು ನಿಧನಕ್ಕೆ ಕಂಬನಿ ಮಿಡಿದ ರಾಹುಲ್ ಗಾಂಧಿ

ನವದೆಹಲಿ: ನಟ ಪುನಿತ್ ರಾಜ್‍ಕುಮಾರ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

Advertisements

ಕನ್ನಡ ನಟ ಪುನೀತ್ ರಾಜ್‍ಕುಮಾರ್ ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಬರೆದುಕೊಂಡು ಪುನೀತ್ ಅವರ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

Advertisements

ಎಂದಿನಂತೆ ಬೆಳಗ್ಗೆ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ಅಪ್ಪು ಬೆಳಗ್ಗೆ 11 ಗಂಟೆ ಸುಮಾರಿಗೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ರಮಣಶ್ರೀ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗಲೇ ಪುನೀತ್ ಸ್ಥಿತಿ ಗಂಭೀರವಾಗಿತ್ತು. ಅವರಿಗೆ ಹೃದ್ರೋಗ ತಜ್ಞರು ಐಸಿಯುನಲ್ಲಿ ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಮ್ಮನೆಲ್ಲ ಅಗಲಿದ್ದಾರೆ.

Advertisements

ಪುನೀತ್ ಆರೋಗ್ಯದಲ್ಲಿ ಏರುಪೇರಾಗಿರುವ ವಿಚಾರವನ್ನು ತಿಳಿದ ಸ್ಯಾಂಡಲ್‍ವುಡ್ ಮಂದಿ, ಗಣ್ಯರು, ಅಭಿಮಾನಿಗಳು ಆಸ್ಪತ್ರೆ ಬಳಿ ದೌಡಾಯಿಸಿದ್ದರು. ಸ್ಯಾಂಡಲ್‍ವುಡ್ ಬಳಗೆವೇ ಆಸ್ಪತ್ರೆಗೆ ಬಂದು ಪುನೀತ್ ಅವರ ಆರೋಗ್ಯ ವಿಚಾರವಾಗಿ ಮಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ನಟ ರವಿಚಂದ್ರನ್, ಯಶ್, ರಾಕ್ ಲೈನ್ ವೆಂಟೇಶ್, ಶ್ರೀ ಮುರುಳಿ, ಶ್ರುತಿ, ಶಿವರಾಜ್‍ಕುಮಾರ್ ದಂಪತಿ ಆಸ್ಪತ್ರೆಗೆ ಬಂದಿದ್ದರು.

Advertisements
Exit mobile version