ಮ್ಯಾಸಿವ್ ಸ್ಟಾರ್ ರಾಜವರ್ಧನ್(Rajavardhan) ನಾಯಕ ನಟನಾಗಿ ಅಭಿನಯಿಸುತ್ತಿರುವ ಮಾಸ್ ಆಕ್ಷನ್ ಸಿನಿಮಾ ‘ಗಜರಾಮ’(Gajaram) ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇತ್ತೀಚೆಗೆ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಮೂಲಕ ಗಮನ ಸೆಳೆದ ಚಿತ್ರತಂಡ ಈಗ ಸಿನಿಮಾದ ಆಕ್ಷನ್ ಸೀನ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ನಾಯಕ ರಾಜವರ್ಧನ್ ಹಾಗೂ ತೆಲುಗಿನ ಖ್ಯಾತ ಖಳನಟ ಕಬೀರ್ ಸಿಂಗ್ ನಡುವಿನ ಹೈ ವೋಲ್ಟೇಜ್ ಆಕ್ಷನ್ ಸೀನ್ ಚಿತ್ರೀಕರಣ ಬೆಂಗಳೂರಿನ ಎಚ್ ಎಂಟಿ ಯಲ್ಲಿ ನಡೆಯುತ್ತಿದೆ. ಆಕ್ಷನ್ ಸೀನ್ ಗಳಲ್ಲಿ ನಾಯಕ ರಾಜವರ್ಧನ್ ಜೊತೆ ಕಬೀರ್ ಸಿಂಗ್(Kabir Singh) ಕಾಳಗ ಜೋರಾಗಿದ್ದು, ಹತ್ತು ದಿನಗಳಿಂದ ಸಾಹಸ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿದೆ.
Advertisement
ಈ ವೇಳೆ ಮಾತನಾಡಿದ ಕಬೀರ್ ಸಿಂಗ್ ಚಿತ್ರದಲ್ಲಿ ನನ್ನ ಪಾತ್ರ ಇಷ್ಟವಾಯಿತು. ರೌಡಿ ಪಾತ್ರ ನನ್ನದು. ಬೇರೆ ಭಾಷೆಯಿಂದ ಇಲ್ಲಿಗೆ ಬಂದಿದ್ದೇನೆ. ಸಿನಿಮಾಗೆ ಭಾಷೆಗಳ ಮಿತಿಯಿಲ್ಲ. ಸದ್ಯ ಹಿಂದಿ ವೆಬ್ ಸಿರೀಸ್ ನಲ್ಲೂ ನಟಿಸುತ್ತಿದ್ದೇನೆ. ಯಾವ ಭಾಷೆಯಾದರೂ ನಾನು ನಟಿಸುತ್ತೇನೆ. ‘ಗಜರಾಮ’ ಸಿನಿಮಾ ಮೇಲೆ ಅಪಾರ ನಿರೀಕ್ಷೆ ಇದೆ ಎಂದು ತಿಳಿಸಿದ್ರು.
Advertisement
Advertisement
ನಾಯಕ ನಟ ರಾಜವರ್ಧನ್ (Actor Rajavardhan) ಮಾತನಾಡಿ ಚಿತ್ರತಂಡ ಸಾಹಸ ದೃಶ್ಯಗಳನ್ನು ಸೆರೆ ಹಿಡಿಯುವುದರಲ್ಲಿ ಬ್ಯುಸಿಯಾಗಿದೆ. ನನ್ನ ಪಾತ್ರ ತುಂಬಾ ಚೆನ್ನಾಗಿದೆ. ಒಳ್ಳೆಯ ಕಥೆ ಹಾಗೂ ಪ್ರೊಡಕ್ಷನ್ ಹೌಸ್ ಸಿಕ್ಕಿರೋರು ಖುಷಿಯಿದೆ. ಇದು ಪಕ್ಕಾ ಕಮರ್ಷಿಯಲ್ ಸಿನಿಮಾ. ನಿರ್ದೇಶಕರು ಹೇಳಿದನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದೇನೆ ಎಂದು ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು. ಚಿತ್ರದ ನಿರ್ದೇಶಕ ಸುನೀಲ್ ಕುಮಾರ್ ನಾನು ಅಂದುಕೊಂಡ ಹಾಗೆ ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ. ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುವೆ. ‘ಗಜರಾಮ’ ಮಾಸ್ ಸಿನಿಮಾ. ಈ ಸಿನಿಮಾದಲ್ಲಿ ಸಂದೇಶ ಇದೆ. ಕ್ಲೈಮ್ಯಾಕ್ಸ್ ಫೈಟಿಂಗ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದ್ರು. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ
Advertisement
ಚಿತ್ರದಲ್ಲಿ ನಟ ಶಿಷ್ಯ ದೀಪಕ್ (Shishya Deepak) ಪೊಲೀಸ್ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಚಿತ್ರದ ಸಾಹಸ ದೃಶ್ಯಗಳಲ್ಲಿ ಭಾಗಿಯಾಗಿದ್ದ ದೀಪಕ್ ಮಾತನಾಡಿ ಚಿತ್ರದಲ್ಲಿ ಪೊಲೀಸ್ ಪಾತ್ರ ನಿರ್ವಹಿಸುತ್ತಿದ್ದೇನೆ, ಸೆಕೆಂಡ್ ಲೀಡ್ ಕ್ಯಾರೆಕ್ಟರ್ ನನ್ನದು, ಪೂರ್ತಿ ಸಿನಿಮಾ ನಾನಿರುತ್ತೇನೆ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು. ‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ, ಮಲ್ಲಿಕಾರ್ಜುನ್ ಕಾಶಿ, ಝವೀಯರ್ ಫರ್ನಾಂಡಿಸ್ ಚಿತ್ರವನ್ನು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.