ಬೆಂಗಳೂರು: ಇತ್ತೀಚೆಗೆ ಸ್ಯಾಂಡಲ್‍ವುಡ್‍ನಲ್ಲಿ ಕಿರುತೆರೆ ನಟ-ನಟಿಯರು ದಾಂಪತ್ಯ ಜೀನವಕ್ಕೆ ಕಾಲಿಡುತ್ತಿದ್ದಾರೆ. ಇದೀಗ `ಪುಟ್ಟಗೌರಿ ಮದುವೆ’ ಧಾರಾವಾಹಿಯ ಖ್ಯಾತಿಯ ಕಿರುತೆರೆ ನಟ ರಕ್ಷ್ ತಮ್ಮ ಗೆಳತಿಯ ಜೊತೆ ಸಪ್ತಪದಿ ತುಳಿದಿದ್ದಾರೆ.
ನಟ ರಕ್ಷ್ ತಮ್ಮ ಗೆಳತಿ ಅನುಷಾ ಅವರನ್ನು ಮದುವೆಯಾಗಿದ್ದಾರೆ. ದಿನಾಂಕ 26 ರಂದು ಬೆಂಗಳೂರು ಅರಮನೆ ಮೈದಾನದ ಶೀಶ್ ಮಹಲ್‍ನಲ್ಲಿ ರಕ್ಷ್ ಮತ್ತು ಅನುಷಾ ಅವರು ಕುಟುಂಬದವರ ಸಮ್ಮಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇವರ ಮದುವೆ ಕಾರ್ಯಕ್ರಮಕ್ಕೆ ಕಿರುತೆರೆ ನಟಿ ರಂಜನಿ ರಾಘವನ್, ಅನುಪಮಾ ಗೌಡ ಸೇರಿದಂತೆ ಅನೇಕರು ಬಂದು ನವಜೋಡಿಗೆ ಹಾರೈಸಿದ್ದಾರೆ. ಇದೀಗ ಇವರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇತ್ತೀಗಷ್ಟೆ ರಕ್ಷ್ ತಾನೂ ಮದುವೆಯಾಗುತ್ತಿರುವುದಾಗಿ ಇನ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದರು. “ಹೌದು. ನಾನು ಮದುವೆಯಾಗುತ್ತಿದ್ದೇವೆ. ಇದು ನನ್ನ ಪ್ರೀತಿಯ ಜನರಿಗೆ ಮದುವೆಯ ಆಮಂತ್ರಣ ಪತ್ರಿಕೆಯಾಗಿದೆ. ಇದೇ ತಿಂಗಳ ದಿನಾಂಕ 26ರಂದು ನನ್ನ ವಿವಾಹ ಇದೆ. ನೀವೆಲ್ಲರೂ ಬಂದು ಆಶೀರ್ವಾದಿಸಬೇಕು” ಎಂದು ಬರೆದುಕೊಂಡು ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದರು.
https://www.instagram.com/p/Bx6z2_nHTF9/
ನಟ ರಕ್ಷ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ `ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ಮಹೇಶ್ ಪಾತ್ರ ಮಾಡಿದ್ದು, ಪ್ರೇಕ್ಷಕರ ಮನ ಗೆದ್ದಿದ್ದರು. ಕೆಲವು ದಿನಗಳ ಹಿಂದೆ ರಕ್ಷಿತ್ ಎಂಬ ಹೆಸರನ್ನು ರಕ್ಷ್ ಎಂದು ಬದಲಾಯಿಸಿಕೊಂಡಿದ್ದರು. ಇದೀಗ ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ರಕ್ಷ್ ನಟಿಸುತ್ತಿದ್ದಾರೆ.