ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ ಮತ್ತು ರಾಜ್ ಬಿ. ಶೆಟ್ಟಿ ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಇದೀಗ ತಿರುಪತಿ (Tirupati) ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿಮ್ಮಪ್ಪನಿಗೆ ವಿಶೇಷ ಪೂಜೆ ಕೂಡ ಸಲ್ಲಿಸಿದ್ದಾರೆ. ಇದನ್ನೂ ಓದಿ:ಇತಿಹಾಸದಲ್ಲೇ ಮೊದಲು- ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ!
ಸದಾ ಸಿನಿಮಾಗಳಲ್ಲಿ ಬ್ಯುಸಿ ಇರುವ ನಟರು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty), ರಾಜ್ ಬಿ. ಶೆಟ್ಟಿ (Raj B Shetty) ಇದೀಗ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ದೇವರ ಸನ್ನಿಧಿಯಲ್ಲಿ ಕಾಲ ಕಳೆದಿದ್ದಾರೆ. ಇದೀಗ ಪೂಜೆಯಲ್ಲಿ ಭಾಗಿಯಾದ ಕೆಲ ಫೋಟೋಗಳು ಗಮನ ಸೆಳೆಯುತ್ತಿದೆ.
ಇನ್ನೂ ರಕ್ಷಿತ್ ಶೆಟ್ಟಿ ನಟನೆಯ ಜೊತೆ ಹೊಸ ಸಿನಿಮಾಗಳ ನಿರ್ಮಾಣದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಮಲಯಾಳಂ ‘ಟರ್ಬೋ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ವಿಲನ್ ಆಗಿ ಅಬ್ಬರಿಸಿ ಗಮನ ಸೆಳೆದಿದ್ದರು. ಈಗ ಅವರಿಗೆ ಕನ್ನಡದ ಜೊತೆ ಪರಭಾಷೆಗಳಲ್ಲೂ ಬೇಡಿಕೆ ಇದೆ.