ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ತಮ್ಮದೇ ನಿರ್ಮಾಣ ಸಂಸ್ಥೆಯ ‘ಏಕಂ’ (Ekam) ವೆಬ್ ಸಿರೀಸ್ ರಿಲೀಸ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಆ್ಯನಿಮೇಷನ್ ಪಾತ್ರದ ಲುಕ್‌ನಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ
2020 ಜನವರಿ. ಅಥವಾ ಫೆಬ್ರವರಿಯೇ? ನೆನಪು ಮಬ್ಬಾಗಿದೆ ಇರಲಿ. ಪರಂವಃ ಹಾಗು ಜರ್ನಿಮ್ಯಾನ್ ಫಿಲಂಸ್ ಒಟ್ಟಿಗೆ ‘ಏಕಂ’ ಮಾಡಲು ಹೊರಟಿದ್ದು ಅಂದು. ಏನೋ ಹೊಸತೊಂದನ್ನು ಮಾಡುವ ಉತ್ಸಾಹ ನಮ್ಮಲ್ಲಿತ್ತು. ಕನ್ನಡದಲ್ಲೊಂದು ವೆಬ್ ಸೀರೀಸ್ ಹೊರ ಬರಲು ಇದೆ ಸೂಕ್ತ ಸಮಯ ಎಂದೆನಿಸಿತ್ತು. ಆದರೆ ಅದೇ ಸಮಯಕ್ಕೆ ಕೋವಿಡ್ ವಕ್ಕರಿಸಿತು. ಜಗತ್ತೇ ತಲೆ ಕೆಳಗಾದ ಸಮಯ. ನಮ್ಮಲ್ಲೂ ಆತಂಕ, ಅನಿಶ್ಚಿತತೆ. ಆದರೂ ಹಿಂದೆ ಸರಿಯದೆ ಮುನ್ನುಗ್ಗಿದೆವು ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಸದ್ಯಕ್ಕಿನ್ನು ಆರೋಪಿಯಷ್ಟೇ, ಅಪರಾಧಿಯಾಗಿಲ್ಲ- ಅನುಷಾ ರೈ ರಿಯಾಕ್ಷನ್
ಅಕ್ಟೋಬರ್ 2021. ‘ಏಕಂ’ನ ಫೈನಲ್ ಕಟ್ ನೋಡಿದೆ. ಖುಷಿ ಆಯಿತು. ಹೆಮ್ಮೆ ಎನಿಸಿತು. ಇದನ್ನ ಜಗತ್ತಿಗೆ ತೋರಿಸಬೇಕೆನಿಸಿತು. ಅದಾಗಿ ಇಂದಿಗೆ ಬರೋಬ್ಬರಿ ಎರಡೂವರೆ ವರ್ಷಗಳು ‘ಏಕಂ’ ಅನ್ನು ಹೊರ ತರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಎಲ್ಲೆಡೆ ನಿರಾಸೆ. ಅದೇ ನೆಪ. ಅದೇ ಸಬೂಬು ಯಾವುದೇ ಕೃತಿಯ ಅರ್ಹತೆಯನ್ನ ನಿರ್ಧರಿಸುವ ಅವಕಾಶ, ಹಾಗು ಹಕ್ಕು. ಪ್ರೇಕ್ಷಕರಿಗಿರಬೇಕು ಎಂದು ಭಾವಿಸುತ್ತೇನೆ ಎಂದಿದ್ದಾರೆ.
View this post on Instagram
ಹಾಗಾಗಿ, ‘ಏಕಂ’ ಅನ್ನು ನಾವು ನಮ್ಮದೇ ಆದ ವೇದಿಕೆಯಲ್ಲಿ ನಿಮ್ಮ ಮುಂದೆ ತರಲು ನಿಶ್ಚಯಿಸಿದ್ದೇವೆ. ‘ಏಕಂ’ ನಿಮಗೆ ಇಷ್ಟವಾಗಬಹುದು. ಇಷ್ಟವಾಗದೇ ಇರಬಹುದು. ಆದರೆ ಈ ಪ್ರಯತ್ನವನ್ನು ನಿರ್ಲಕ್ಷಿಸುವಂತಿಲ್ಲ ಎಂಬುದನ್ನು ನಾನು ಬಲವಾಗಿ. ನಂಬಿದ್ದೇನೆ. ‘ಏಕಂ’ ಒಂದು ಶ್ಲಾಘನೀಯ ಪ್ರಯತ್ನ. ಇದನ್ನು ನಾವು ಎಷ್ಟು ಪ್ರೀತಿಯಿಂದ ಮಾಡಿದ್ದೇವೋ, ಅಷ್ಟೇ ಪ್ರೀತಿಯಿಂದ ನೀವು ನಮ್ಮ ಈ ಪ್ರಯತ್ನವನ್ನ ಸ್ವೀಕರಿಸುತ್ತೀರಿ ಎಂದು ಆಶಿಸುತ್ತೇನೆ ಎಂದು ರಕ್ಷಿತ್ ಶೆಟ್ಟಿ ಹೇಳಿಕೊಂಡಿದ್ದಾರೆ.
ಅಂದಹಾಗೆ, ಜುಲೈ 13ರಂದು ‘ಏಕಂ’ ವೆಬ್ ಸಿರೀಸ್ ಆಗಲಿದೆ. ಇದರಲ್ಲಿ ರಾಜ್ ಬಿ ಶೆಟ್ಟಿ, ಶೈನ್ ಶೆಟ್ಟಿ, ಪ್ರಕಾಶ್ ರಾಜ್, ಕಾಂತಾರ ನಟಿ ಮಾನಸ ಸುದೀರ್ ಸೇರಿದಂತೆ ಅನೇಕರು ನಟಿಸಿದ್ದಾರೆ.