ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲುಗು ಸ್ಟಾರ್‌ ರಾಮ್‌ ಚರಣ್‌

actor ram charan met cm siddaramaiah

– ಪೆದ್ದಿ ಸಿನಿಮಾ ಶೂಟಿಂಗ್‌ಗಾಗಿ ಮೈಸೂರಲ್ಲಿ ಬೀಡುಬಿಟ್ಟಿರುವ ಚಿತ್ರತಂಡ

ತೆಲುಗು ಚಿತ್ರರಂಗದ ಸ್ಟಾರ್‌ ನಟ ರಾಮ್‌ ಚರಣ್‌ (Ram Charan) ಭಾನುವಾರ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿಯಾಗಿದ್ದಾರೆ.

ಮೈಸೂರಿನಲ್ಲಿ (Mysuru) ಪೆದ್ದಿ (Peddi Movie) ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್‌ ಚರಣ್, ಮೈಸೂರು ನಿವಾಸದಲ್ಲಿ ಸಿಎಂ ಭೇಟಿಯಾದರು. ಸಿದ್ದರಾಮಯ್ಯಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ ನಟ ಗೌರವಿಸಿದರು. ಈ ವೇಳೆ ಸಚಿವ ಸಂತೋಷ್‌ ಲಾಡ್‌, ಸಿಎಂ ಪುತ್ರ ಹಾಗೂ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಕೂಡ ಇದ್ದರು. ಇದನ್ನೂ ಓದಿ: 1,000 ಡ್ಯಾನ್ಸರ್ಸ್ ಜೊತೆ ಮೈಸೂರಲ್ಲಿ ರಾಮ್ ಚರಣ್ ಸಿನಿಮಾ ಶೂಟಿಂಗ್

ram charan met cm siddaramaiah 1

ರಾಮ್ ಚರಣ್ ನಾಯಕನಾಗಿ ಅಭಿನಯಿಸುತ್ತಿರುವ ಪೆದ್ದಿ (Peddi) ಚಿತ್ರೀಕರಣ ಮೈಸೂರಿನಲ್ಲಿ ಭರದಿಂದ ಸಾಗುತ್ತಿದೆ. ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್‌ವೊಂದನ್ನು ಈಚೆಗೆ ಶೂಟಿಂಗ್ ನಡೆಸಲಾಗಿದೆ. 1,000 ಡ್ಯಾನ್ಸರ್ಸ್ ಜೊತೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಖ್ಯಾತ ಡ್ಯಾನ್ಸ್ ಮಾಸ್ಟರ್ ಜಾನಿ ಈ ಹಾಡಿಗೆ ಕೊರಿಯೋಗ್ರಾಫ್‌ ಮಾಡಿದ್ದಾರೆ. ಬಹಳ ಅದ್ಧೂರಿಯಾಗಿ ದೊಡ್ಡ ಬಜೆಟ್‌ನಲ್ಲಿ ಈ ಸಾಂಗ್ ಚಿತ್ರೀಕರಣ ನಡೆಸಲಾಗಿದೆ.

ಉಪ್ಪೇನ ನಿರ್ದೇಶಕ ಬುಚ್ಚಿಬಾಬು ಸನಾ ನಿರ್ದೇಶನ ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಕಥಾಹಂದರ ಹೊಂದಿದೆ. ರಾಮ್ ಚರಣ್‌ಗೆ ಜಾನ್ವಿ ಕಪೂರ್ (Janhvi Kapoor) ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ