ಸ್ಯಾಂಡಲ್‌ವುಡ್ ನಟ ರಮೇಶ್ ಅರವಿಂದ್ ‘ಕೆಡಿ’ (KD) ತಂಡಕ್ಕೆ ಸೇರಿಕೊಂಡಿದ್ದಾರೆ. ಸಿನಿಮಾದಲ್ಲಿನ ಅವರ ಪಾತ್ರದ ಲುಕ್ ರಿವೀಲ್ ಆಗಿದೆ. ಡಿಫರೆಂಟ್ ಆಗಿ ರಮೇಶ್ ಅರವಿಂದ್ (Ramesh Aravind) ಕಾಣಿಸಿಕೊಂಡಿದ್ದಾರೆ. ರಮೇಶ್ ನಟಿಸಿರುವ ಧರ್ಮ ಪಾತ್ರದ ಲುಕ್ ಈಗ ರಿವೀಲ್ ಆಗಿದೆ.
ಎವರ್‌ಗ್ರೀನ್ ನಟ ರಮೇಶ್ ಅರವಿಂದ್ ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ ಲಾಂಗ್ ಹಿಡಿದು ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ಎಂದೂ ಅವರು ಲಾಂಗ್ ಹಿಡಿದಿಲ್ಲ. ಆದರೆ ಜೋಗಿ ಪ್ರೇಮ್, ಮೊದಲ ಬಾರಿಗೆ ರಮೇಶ್ ಕೈಯಲ್ಲಿ ಲಾಂಗ್ ಹಿಡಿಸಿದ್ದಾರೆ.
ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ಬಣ್ಣ ಹಚ್ಚಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ. ಇದನ್ನೂ ಓದಿ:ಅರಿಶಿನ ಶಾಸ್ತ್ರದಲ್ಲಿ ಮಿಂದೆದ್ದ ವರುಣ್ ತೇಜ್-ಲಾವಣ್ಯ ಜೋಡಿ
View this post on Instagram
ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ , ಸಂಜಯ್ ದತ್, ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.
1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]