– ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಬರೋದು ಡೌಟ್ ಎಂದ ಶಾಸಕ
ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ನಟಿ ರಮ್ಯಾ (Actor Ramya) ಮತ್ತು ನಟ ದುನಿಯಾ ವಿಜಯ್ (Duniya Vijay) ಬರುತ್ತಾರೆ. ಆದ್ರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರುವ ಪ್ಲಾನ್ ಇಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.
Advertisement
Advertisement
ಈ ಕುರಿತು ʻಪಬ್ಲಿಕ್ ಟಿವಿʼಯೊಂದಿಗೆ (Public TV) ಮಾತನಾಡಿರುವ ಯತೀಂದ್ರ ಅವರು, ಸಿದ್ದರಾಮಯ್ಯ (Siddaramaiah) ಅವರು ಮೇ 4 ರಿಂದ ಮೈಸೂರಿನಲ್ಲೇ (Mysuru) ಇದ್ದು ಪ್ರಚಾರ ನಡೆಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮನವಿ
Advertisement
Advertisement
ಕಳೆದ 10 ದಿನಗಳಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದೇವೆ. ವರುಣಾ ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಈಗಲೂ ಸಿದ್ದರಾಮಯ್ಯ ಅವರು ಕೊಟ್ಟಂತಹ ಕಾರ್ಯಕ್ರಮಗಳನ್ನ ನೆನೆಯುತ್ತಿದ್ದಾರೆ. ಬಿಜೆಪಿಯವರ ದುರಾಡಳಿತದಿಂದ ಜನ ಬೇಸತ್ತಿದ್ದು, ಕಾಂಗ್ರೆಸ್ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ಬಿಜೆಪಿಯವರಿಗೆ ನನ್ನ ತಂದೆ ಕೊಟ್ಟ ಆಡಳಿತದಲ್ಲಿ ತಪ್ಪು ಹುಡುಕಲಾಗುತ್ತಿಲ್ಲ, ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಮಾಡೋಕೆ ಆಗ್ತಿಲ್ಲ. ಹಾಗಾಗಿ ಜಾತಿ ವಿರೋಧಿ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟುವ ಪ್ರಯತ್ನವನ್ನ ಬಿಜೆಪಿ ಮಾಡ್ತಿದೆ. ಅದು ಯಶಸ್ವಿಯಾಗಲ್ಲ. ಬಿಜೆಪಿ ಐಟಿ ಸೆಲ್ ಒಂದು ರೀತಿ ಸುಳ್ಳಿನ ಫ್ಯಾಕ್ಟರಿ ಇದ್ದಂತೆ. ಲಿಂಗಾಯತ ಸಮಯದಾಯಗಳ ವೋಟ್ ಪಡೆಯುವುದಕ್ಕಾಗಿ ಬೇರೆ ದಾರಿಯಿಲ್ಲದೇ ಲಿಂಗಾಯತ ವಿರೋಧಿ ಹಣೆಪಟ್ಟಿ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.