ಬಾಲಿವುಡ್ ಖ್ಯಾತ ನಟ, ಕರ್ನಾಟಕದ ಅಳಿಯ ರಣವೀರ್ ಸಿಂಗ್ ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು ಅಚ್ಚರಿಗೆ ಕಾರಣವಾಗಿದ್ದರು. ಸದಾ ಮೈ ತುಂಬಾ ಬಟ್ಟೆ ಹಾಕಿಕೊಂಡು ಓಡಾಡುತ್ತಿದ್ದ ರಣವೀರ್, ಇದ್ದಕ್ಕಿದ್ದಂತೆಯೇ ಪೂರ್ಣ ಬೆತ್ತಲೆಯಾಗಿ ಕಾಣಿಸಿಕೊಂಡು ಕುತೂಹಲಕ್ಕೂ ಕಾರಣವಾಗಿದ್ದರು. ಈ ಕಾರಣಕ್ಕಾಗಿ ಇದೀಗ ಅವರ ಮೇಲೆ ದೂರು ದಾಖಲಾಗಿದೆ. ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು, ಸಮಾಜ ಸ್ವಾಸ್ತ್ಯವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
Advertisement
ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಶನ್ ಮುಂಬೈನಲ್ಲಿ ದೂರು ದಾಖಲಿಸಲಾಗಿದ್ದು, ವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಟರು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಫೌಂಡೇಶನ್ ಆಗ್ರಹಿಸಿದೆ. ಕ್ರಮ ತಗೆದುಕೊಳ್ಳುವ ಮೂಲಕ ನಟರಿಗೆ ಸ್ಪಷ್ಟ ಸಂದೇಶವನ್ನು ನೀಡಬೇಕು ಎಂದು ಪೊಲೀಸ್ ಇಲಾಖೆಗೆ ಅದು ಮನವಿ ಮಾಡಿದೆ. ಅಲ್ಲದೇ, ರಣವೀರ್ ಅಭಿಮಾನಿಗಳಿಗೆ ಕ್ಷಮೆ ಕೇಳಬೇಕೆಂದು ಹೇಳಿದೆ. ಇದನ್ನೂ ಓದಿ:ಬನ್ಸಾಲಿ ನಿರ್ದೇಶನದಲ್ಲಿ ಬಹುಭಾಷಾ ನಟಿ ಅದಿತಿ ರಾವ್
Advertisement
Advertisement
ರಣವೀರ್ ಪೂರ್ಣ ಬೆತ್ತಲೆಯಾಗಿ ಕಾಣಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಕೂಡ ರಣವೀರ್ ಸಿಂಗ್ ಈ ರೀತಿಯಲ್ಲಿ ಕಾಣಿಸಿಕೊಳ್ಳಬಾರದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಸ್ವತಃ ಪತ್ನಿ ದೀಪಿಕಾ ಪಡುಕೋಣೆ ಕೂಡ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.