ಬೆಂಗಳೂರು: ಆರ್ಮುಗಂ ಖ್ಯಾತಿಯ ರವಿಶಂಕರ್ ಇಂದು 51ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ತಡರಾತ್ರಿ ಬೆಂಗಳೂರಿನ ನ್ಯಾಯಾಂಗ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಸಿಕೊಂಡರು. ರಾಜ್ಯದ ವಿವಿಧ ಭಾಗದಿಂದ ಆಗಮಿಸಿದ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದರು.
ಇದೇ ವೇಳೆ ಮಾತನಾಡಿದ ರವಿಶಂಕರ್ ಅಭಿಮಾನಿಗಳ ಪ್ರೀತಿಗೆ ನಾನು ಅಭಾರಿಯಾಗಿದ್ದೇನೆ. ಇಂದು ಅನಾಥಶ್ರಮಕ್ಕೆ ಹೋಗಿ ಹುಟ್ಟುಹಬ್ಬವನ್ನು ಆಚರಿಸುತ್ತೇನೆ. ಸದ್ಯ ಅಂಜನಿಪುತ್ರ ಚಿತ್ರದಲ್ಲಿ ಅಭಿನಯಿಸುತ್ತೀದ್ದೇನೆ ಎಂದು ಹೇಳಿದ್ದಾರೆ.
ಕೆಂಪೇಗೌಡ ಚಿತ್ರದಿಂದ ಸ್ಯಾಂಡಲ್‍ವುಡ್ ಗೆ ಪಾದಾರ್ಪಣೆ ಮಾಡಿದ ರವಿಶಂಕರ್ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಖಳನಟನಾಗಿ, ಹ್ಯಾಸ ನಟನಾಗಿ ಅಭಿನಯಿಸಿ ಜನರನ್ನು ರಂಜಿಸುತ್ತಿದ್ದಾರೆ.