ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ (Rishab Shetty) ಅವರನ್ನು ನೇಮಕ ಮಾಡಲಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅಧ್ಯಕ್ಷತೆಯಲ್ಲಿ ಶುಕ್ರವಾರ ಕರಾವಳಿ ಪ್ರವಾಸೋದ್ಯಮ ಸಭೆ ನಡೆಸಲಾಯಿತು. ಸಭೆಯಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇನ್ನು 20 ದಿನದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಇದನ್ನೂ ಓದಿ: ಕಾಕ್‌ಟೇಲ್ 2ನಲ್ಲಿ ರಶ್ಮಿಕಾ ಮೂಲೆಗುಂಪು – ರೊಚ್ಚಿಗೆದ್ರು ಫ್ಯಾನ್ಸ್
ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿಯ ಬಗ್ಗೆ ಮಂಗಳೂರು ಸಚಿವ ಸಂಪುಟದಲ್ಲಿ ಚರ್ಚಿಸಿ ಸಿಎಂ ಒಪ್ಪಿಗೆ ಪಡೆಯಲಿದ್ದಾರೆ. ಜೊತೆಗೆ ಆ ಭಾಗದಲ್ಲಿ ಹೋಂ ಸ್ಟೇಗಳಿಗೆ ತುಂಬಾ ನಿಯಮ ರೂಪಿಸಲಾಗುತ್ತಿದೆ. ಅವುಗಳನ್ನ ಸಡಿಲಗೊಳಿಸುವಂತೆ ಸೂಚಿಸಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ತುಷಾರ್ ಗಿರಿನಾಥ್ ಸೇರಿದಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ನಲ್ಲಿ ಲವ್ ಮಾಕ್ಟೇಲ್ 3
