‘ಜೈ ಹನುಮಾನ್’ ಸೀಕ್ವೆಲ್‌ನಲ್ಲಿ ರಿಷಬ್ ಶೆಟ್ಟಿ?

Public TV
1 Min Read
Rishabh Shetty

ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ ಚಾಪ್ಟರ್ 1’ರಲ್ಲಿ (Kantara Chapter 1) ಬ್ಯುಸಿಯಾಗಿದ್ದಾರೆ. ಇದೀಗ ‘ಜೈ ಹನುಮಾನ್ ಪಾರ್ಟ್ 2’ನಲ್ಲಿ (Jai Hanuman Sequel) ರಿಷಬ್ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ

prashanth varma

ಸೂಪರ್ ಹಿಟ್ ಚಿತ್ರ ಜೈ ಹನುಮಾನ್ ಸಿನಿಮಾದ ಸೀಕ್ವೆಲ್‌ಗೆ ಸಿದ್ಧತೆ ನಡೆಯುತ್ತಿದೆ. ಈ ಚಿತ್ರದ ಪಾರ್ಟ್ 2ನಲ್ಲಿ ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಲು ಚಿತ್ರತಂಡ ನಟನನ್ನು ಅಪ್ರೋಚ್ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಿಷಬ್ ಆಗಲಿ, ನಿರ್ಮಾಣ ಸಂಸ್ಥೆ ಆಗಲಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದು ಸದ್ಯ ಹರಿದಾಡುತ್ತಿರುವ ಗಾಸಿಪ್ ಅಥವಾ ನಿಜ ಸಂಗತಿನಾ? ಎಂಬುದನ್ನು ಚಿತ್ರತಂಡ ತಿಳಿಸುವವರೆಗೂ ಕಾದುನೋಡಬೇಕಿದೆ.

rishab shetty 1

ಅಂದಹಾಗೆ, 2024ರಲ್ಲಿ ತೆರೆಕಂಡ ‘ಜೈ ಹನುಮಾನ್’ ಚಿತ್ರದಲ್ಲಿ ತೇಜ ಸಜ್ಜಾ ಮತ್ತು ಅಮೃತಾ ಅಯ್ಯರ್ ಜೋಡಿಯಾಗಿ ನಟಿಸಿದ್ದರು. ಈ ಚಿತ್ರಕ್ಕೆ ಪ್ರಶಾಂತ್ ವರ್ಮಾ ಆ್ಯಕ್ಷನ್ ಕಟ್ ಹೇಳಿದ್ದರು. ಇದೀಗ ಇದರ ಎರಡನೇ ಭಾಗಕ್ಕೆ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ.

Share This Article