ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. 1.3 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರನ್ನು ಅವರು ಖರೀದಿಸಿದ್ದಾರೆ. ಹೊಸ ಕಾರಿನ ಫೋಟೋಗಳು ವೈರಲ್ ಆಗ್ತಿವೆ. ಇದನ್ನೂ ಓದಿ:ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳಿದ್ದಾರೆ, 5 ತಿಂಗಳಲ್ಲಿ ಪರಿಹಾರ: ರಿಷಬ್‌ಗೆ ಪಂಜುರ್ಲಿ ಅಭಯ
‘ಕಾಂತಾರ’ (Kantara) ಸಕ್ಸಸ್ ಬಳಿಕ ರಿಷಬ್‌ಗೆ ಬೇಡಿಕೆ ಹೆಚ್ಚಾಗಿದೆ. ಕನ್ನಡ ಮತ್ತು ದಕ್ಷಿಣದ ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಮನೆಗೆ ದುಬಾರಿ ಕಾರನ್ನು ಖರೀದಿಸಿ ತಂದಿದ್ದಾರೆ. 1.3 ಕೋಟಿ ರೂ. ಮೌಲ್ಯದ ಟೊಯೋಟಾ ವೆಲ್ ಫೈರ್ ಕಾರನ್ನು ಕೊಂಡುಕೊಂಡಿದ್ದಾರೆ. ಇದನ್ನೂ ಓದಿ:ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡ ನಟಿ ವೈಷ್ಣವಿ ಗೌಡ
ಹೊಸ ಕಾರು ಖರೀದಿಸಿದ ಖುಷಿಯಲ್ಲಿ ಮಡದಿ ಪ್ರಗತಿ ಶೆಟ್ಟಿ (Pragathi Shetty) ಹಾಗೂ ಮಕ್ಕಳೊಂದಿಗೆ ನಿಂತು ಕಾರಿನ ಮುಂದೆ ರಿಷಬ್ ಪೋಸ್ ಕೊಟ್ಟಿದ್ದಾರೆ.
ಅಂದಹಾಗೆ, ಕಾಂತಾರ ಚಾಪ್ಟರ್ 1, ಜೈ ಹನುಮಾನ್, ಶಿವಾಜಿ ಬಯೋಪಿಕ್ ಸಿನಿಮಾಗಳು ಅವರ ಕೈಯಲ್ಲಿವೆ.