ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಸದ್ಯ ‘ಕಾಂತಾರ’ (Kantara 1) ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು (ಮೇ.7) ಬೈಂದೂರಿನ ಕೆರಾಡಿಯಲ್ಲಿ ರಿಷಬ್ ಮತದಾನ ಮಾಡಿದ್ದಾರೆ. ಈ ವೇಳೆ, ಕಾಂತಾರ ಪಾರ್ಟ್ 1 ಬಗ್ಗೆ ರಿಷಬ್ ಮಾಹಿತಿ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಿಷಬ್, ಜನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ರೆ ಒಳ್ಳೆಯದು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣ ಆರಂಭವಾಗಿದೆ. ಸಿನಿಮಾದ ಕೆಲಸ ಬಹಳ ಚೆನ್ನಾಗಿ ನಡೆಯುತ್ತಿದೆ ಎಂದು ರಿಷಬ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ದಿ ಫ್ಯಾಮಿಲಿ ಮ್ಯಾನ್ 3’ ಸಿರೀಸ್ ಬಗ್ಗೆ ಸಿಹಿಸುದ್ದಿ ಕೊಟ್ಟ ಮನೋಜ್ ಬಾಜಪೇಯಿ
‘ಕಾಂತಾರ’ ಸಕ್ಸಸ್ ನಂತರ ಮೊದಲಿಗಿಂತ ಜವಾಬ್ದಾರಿ ಹೆಚ್ಚಾಗಿದೆ. ನಮ್ಮ ಸಿನಿಮಾಗಾಗಿ ದೊಡ್ಡ ತಂಡ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಹೊಂಬಾಳೆ ಸಂಸ್ಥೆ ಸಿಕ್ಕಿರುವುದು ಫಿಲ್ಮ್ ಮೇಕರ್‌ಗೆ ಒಂದು ಪುಣ್ಯ ಎಂದು ರಿಷಬ್ ಖುಷಿಯಿಂದ ಮಾತನಾಡಿದ್ದಾರೆ. ಕಾಂತಾರಗಾಗಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ ಎಂದು ರಿಷಬ್ ಹೇಳಿದ್ದಾರೆ.
ಜನ ‘ಕಾಂತಾರ’ ಚಿತ್ರವನ್ನು ಗೆಲ್ಲಿಸಿದ್ದಾರೆ ಬಾಯಲ್ಲಿ ಏನು ಹೇಳಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ. ನನಗೆ ಯಾವ ಒತ್ತಡವು ಇಲ್ಲ. ಆಗ ನನಗೆ ಬಹಳ ದೊಡ್ಡ ಚಿತ್ರವಾಗಿತ್ತು. ಸಿನಿಮಾ ಯಾವಾಗಲೂ ಕಲಿಯುವ ಪ್ರೊಸೆಸ್ ಅದನ್ನು ಮಾಡುತ್ತಿದ್ದೇನೆ ಎಂದಿದ್ದಾರೆ ರಿಷಬ್.
ಈ ವೇಳೆ, ಸಿನಿಮಾಗೋಸ್ಕರ ಒಂದು ವರ್ಷದಿಂದ ಗಡ್ಡ ಕೂದಲು ಬಿಟ್ಟಿರೋದಾಗಿ ತಿಳಿಸಿದ್ದಾರೆ. ಇನ್ನೂ ‘ಕಾಂತಾರ 1’ ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಅಭಿಮಾನಿಗಳಿಗೆ, ಮಾಧ್ಯಮದವರಿಗೆ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ ಎಂದು ರಿಷಬ್ ತಿಳಿಸಿದ್ದಾರೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ನಮ್ಮ ಸಿನಿಮಾ ಪೂರ್ತಿ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡುತ್ತೇವೆ ಎಂದು ರಿಷಬ್ ಮಾತನಾಡಿದ್ದಾರೆ.
ಅಂದಹಾಗೆ, ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ (Sapthami Gowda) ನಟನೆಯ ‘ಕಾಂತಾರ’ (Kantara) ಸಿನಿಮಾ 2022ರಲ್ಲಿ ಸೆ.30ರಂದು ರಿಲೀಸ್ ಆಗಿತ್ತು. ಸಿನಿಮಾ ಸಕ್ಸಸ್ ಕಂಡಿತ್ತು.