ನಟ ಸಲ್ಮಾನ್ ಖಾನ್ ಪ್ರಕರಣ: ಜೈಲಿನಲ್ಲಿನ ಆತ್ಮಹತ್ಯೆ ಕೇಸ್ ಅನ್ನು ಸಿಬಿಐ ತನಿಗೆ ಮನವಿ

Public TV
2 Min Read
salman khan 3 1

ಬಾಲಿವುಡ್ ನಟ ಸಲ್ಮಾನ್ ಖಾನ್  (Salman Khan) ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ (Anuj Thapas) ಎಂಬ ವ್ಯಕ್ತಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಕುಟುಂಬ ಮುಂಬೈ ಹೈಕೋರ್ಟ್ (Court)  ಮೆಟ್ಟಿಲು ಏರಿದ್ದರು. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Salman Khan

ತಮ್ಮ ಮಗನು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಅವರು ಮಗನನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಣೆಯಲ್ಲಿನ ಸಿಸಿಟಿವಿ ವಿಡಿಯೋವನ್ನು ಒಪ್ಪಿಸುವಂತೆ ಮತ್ತು ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ಮಾಡಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಥಾಪನ್ ಠಾಣೆಯ ಪೊಲೀಸರ ಹಿಂಸೆಯಿಂದಾಗಿ ತಾವು ಮಗನನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ ಪೋಷಕರು.

salman khan 1 1

ಏನಿದು ಪ್ರಕರಣ

ಸಲ್ಮಾನ್  ಮನೆ ಮುಂದಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಗುಂಡಿನ ದಾಳಿ ಮಾಡಿದವರನ್ನು ಅರೆಸ್ಟ್ ಮಾಡಲಾಗಿತ್ತು. ನಂತರ ಗನ್ ಅನ್ನು ನದಿಯಲ್ಲಿ ಬೀಸಾಕಿದ್ದನ್ನು ಪತ್ತೆ ಹಚ್ಚಿ, ಗನ್ ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಆಮೇಲೆ ಗನ್ ಸಪ್ಲೈ ಮಾಡಿದವರನ್ನೂ ಪೊಲೀಸರು ಬಂಧಿಸಿದ್ದರು.

salman khan 1

ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದು ಸುಭಾಷ್ ಚಂದರ್ ಮತ್ತು ಅನುಜ್ ಥಾಪಸ್ ಎಂದು ಗೊತ್ತಾಗಿತ್ತು. ಈ ಇಬ್ಬರನ್ನೂ ಪಂಜಾಬ್ (Punjab) ನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಮಾರ್ಚ್ 15ರಂದು ಆರೋಪಿಗಳಿಗೆ ಇವರು ಪಿಸ್ತೂಲ್ ಮತ್ತು ಕಾಟ್ರಿಜ್ ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದರು. ಈ ಇಬ್ಬರು ವ್ಯಕ್ತಿಗಳಲ್ಲಿ ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದ.

 

ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ.  ಆರೋಪಿ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Share This Article