ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬಂದ ಬೆದರಿಕೆ ಪತ್ರಗಳ ಹಿನ್ನೆಲೆ ಸ್ವಯಂ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಬೇಕೆಂದು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಮುಂಬೈ ಪೊಲೀಸರು ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಿದ್ದಾರೆ.
Advertisement
ಮೇ 29ರಂದು ಪಂಜಾಬ್‍ನ ಮಾನ್ಸಾ ಬಳಿ ಗಾಯಕ ಸಿಧು ಮೂಸೆ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ಸಲ್ಮಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು. ಕಳೆದ ತಿಂಗಳು ಸಲ್ಮಾನ್ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಶಸ್ತ್ರಾಸ್ತ್ರ ಪರವಾನಗಿ ನೀಡುವಂತೆ ಮನವಿ ಮಾಡಿದ್ದರು. ಆಗಿನಿಂದ ಪರವಾನಗಿ ನೀಡಿಕೆ ಪ್ರಾಧಿಕಾರವು ಅಗತ್ಯ ತನಿಖೆಯನ್ನು ಪ್ರಾರಂಭಿಸಿತ್ತು. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವೈಟ್‍ಲಿಫ್ಟರ್ ‘ಅಚಿಂತಾ ಶೆಯುಲಿ’ – ಮೋದಿಯಿಂದ ಅಭಿನಂದನೆ
Advertisement
Advertisement
ಗನ್ ಲೈಸೆನ್ಸ್‍ಗಾಗಿ ಟಾಪ್ ಕಾಪ್ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿ ಮಾಡಲು ಕಳೆದ ತಿಂಗಳ ಕೊನೆಯಲ್ಲಿ ಸಲ್ಮಾನ್ ಮುಂಬೈ ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದರು. ಅವರು ತನ್ನನ್ನು ಮತ್ತು ತನ್ನ ಕುಟುಂಬವನ್ನು ರಕ್ಷಿಸಿಕೊಳ್ಳಲು ಗನ್ ಹೊಂದಲು ಬಯಸುತ್ತಾನೆ ಎಂದು ತಿಳಿಸಿದ್ದರು. ಅಧಿಕಾರಗಳ ಮಾರ್ಗದರ್ಶನದಂತೆ ಅರ್ಜಿಯನ್ನು ಸಲ್ಲಿಸಿದ್ದರು.