ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಯ ಹೊರಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಇಬ್ಬರೂ ಶಂಕಿತ ಆರೋಪಿಗಳು ಅರೆಸ್ಟ್ ಆಗಿರುವ ಬೆನ್ನಲ್ಲೇ ಅಪರಾಧದಲ್ಲಿ ಬಳಸಿದ ಮೊದಲ ಗನ್ ಪೊಲೀಸರಿಗೆ ಸಿಕ್ಕಿತ್ತು. ಇದೀಗ ಎರಡನೇ ಗನ್ ಕೂಡ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ:ಮತ್ತೆ ಶೋಭಿತಾ ಜೊತೆ ತಗ್ಲಾಕೊಂಡ ನಾಗಚೈತನ್ಯ- ಡೇಟಿಂಗ್ ಸುದ್ದಿಗೆ ಸಿಕ್ತು ಸಾಕ್ಷಿ
Advertisement
ದಿನದಿಂದ ದಿನಕ್ಕೆ ತನಿಖೆ ಚುರುಕಾಗುತ್ತಿದೆ. ಸಲ್ಮಾನ್ ಖಾನ್ ದುಬೈಗೆ ಹಾರಿದ ಬೆನ್ನಲ್ಲೇ ಎನ್‌ಕೌಂಟರ್ ಸ್ಪೆಷಲಿಷ್ಟ್ ದಯಾ ನಾಯಕ್ (Daya Nayak) ಎಂಟ್ರಿ ಕೊಟ್ಟಿದ್ದಾರೆ. ಇದೀಗ ತನಿಖೆಯ ವೇಳೆ, ಸೂರತ್‌ನ ತಾಪಿ ನದಿಯಲ್ಲಿ ಗನ್ ಎಸೆದಿರುವುದಾಗಿ ಹೇಳಿದ್ದರು. ಅವರ ಹೇಳಿಕೆ ಬೆನ್ನಲ್ಲೇ ಕಾರ್ಯಚರಣೆ ನಡೆಸಿದ ಬಳಿಕ ಎರಡನೇ ಗನ್ ಕೂಡ ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ 3 ಮ್ಯಾಗಜೀನ್‌ಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.
Advertisement
Advertisement
ಅಂದಹಾಗೆ, ಸಲ್ಮಾನ್ ಖಾನ್ ಮುಂಬೈ ನಿವಾಸದ ಹೊರಗೆ ಏ.14ರಂದು ಗುಂಡಿನ ಸದ್ದು ಕೇಳಿ ಬಂದಿತ್ತು. ಈ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೇಳಿಕೊಂಡಿದ್ದರು. ಅನ್ಮೋಲ್ ಈಗ ಅಮೆರಿಕದಲ್ಲಿದ್ದಾರೆ. ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಇಬ್ಬರೂ ಶಂಕಿತರನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದರು. ಸಿಸಿಟಿವಿ ದೃಶ್ಯದಲ್ಲಿ ಕಾಣಿಸಿಕೊಂಡ 2 ಶೂಟರ್‌ಗಳನ್ನು ಮುಂಬೈ ಪೊಲೀಸರು ಗುರುತಿಸಿ ಬಂಧಿಸಿದ್ದರು.
Advertisement
ಅನ್ಮೋಲ್‌ನ ಫೇಸ್‌ಬುಕ್ ಪೇಜ್‌ನಲ್ಲಿ, ಈ ಘಟನೆ ಟ್ರೈಲರ್ ಮಾತ್ರ. ಇದಕ್ಕಿಂತಲೂ ಭೀಕರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ಸಲ್ಮಾನ್ ಖಾನ್‌ಗೆ ಎಚ್ಚರಿಕೆ ನೀಡಿದ್ದರು. ಸಲ್ಮಾನ್ ಖಾನ್ ಇದು ನಾವು ನಿಮಗೆ ತೋರಿಸಿದ್ದು, ಟ್ರೈಲರ್ ಮಾತ್ರ. ನಮ್ಮ ಸಾಮರ್ಥ್ಯ, ಶಕ್ತಿ ಏನು ಎಂಬುದರ ಪರಿಚಯ ಮಾಡಲು ಈ ಕ್ರಮ ಕೈಗೊಂಡಿದ್ದೇವೆ. ಇದು ನಾವು ನೀಡುವ ಮೊದಲ ಮತ್ತು ಕೊನೆಯ ವಾರ್ನಿಂಗ್ ಎಂದು ಫೇಸ್‌ಬುಕ್‌ನಲ್ಲಿ ಬರೆದಿದ್ದರು.
ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್, ಸಲ್ಮಾನ್ ಖಾನ್ ಹತ್ಯೆ ಮಾಡುವುದಾಗಿ ಹೇಳಿದ್ದ. ತಾನು ಟಾರ್ಗೆಟ್ ಮಾಡಿರುವ 10 ಮಂದಿ ಹೆಸರಿನ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಮೊದಲಿಗರಾಗಿದ್ದಾರೆ ಎಂದಿದ್ದ. 1998ರ ಕೃಷ್ಣಮೃಗ ಬೇಟೆ ಆರೋಪ ಹೊತ್ತಿರುವ ಬಾಲಿವುಡ್ ನಟನ ಮೇಲೆ ಬಿಷ್ಣೋಯ್ ಹಗೆ ಸಾಧಿಸುತ್ತಿದ್ದಾನೆ.
ಬಿಷ್ಣೋಯ್ ತನ್ನ ಸಹಾಯಕ ಸಂಪತ್ ನೆಹ್ರಾ ಬಳಸಿಕೊಂಡು ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಕಣ್ಣಿಟ್ಟಿದ್ದ. ವಿಚಾರ ತಿಳಿಯುತ್ತಿದ್ದಂತೆ ನೆಹ್ರಾನನ್ನು ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ವಶಪಡಿಸಿಕೊಂಡಿತ್ತು.