– ಇತ್ತ ಶಾರೂಖ್ ಭೇಟಿಯಾದ ಸಲ್ಮಾನ್ ಖಾನ್
ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡ್ತಿದ್ದ ಆರೋಪದಡಿ ರಾಷ್ಟ್ರೀಯ ಮಾದಕ ದ್ರವ್ಯ ತಡೆ ದಳ (ಎನ್‍ಸಿಬಿ) ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಒಳಗೊಂಡು 3 ಮಂದಿಯನ್ನು ಬಂಧಿಸಿದೆ. ಆತನನ್ನ ನಿನ್ನೆ ಎನ್‍ಸಿಬಿ ಕೋರ್ಟ್ ಒಂದು ದಿನದ ಮಟ್ಟಿಗೆ ಎನ್‍ಸಿಬಿ ಕಸ್ಟಡಿಗೆ ಒಪ್ಪಿಸಿದೆ. ಇದನ್ನೂ ಓದಿ: ಶಾರುಖ್ ಪುತ್ರ ಆರ್ಯನ್ ಇನ್ನೂ ಮಗು, ಉಸಿರಾಡಲು ಬಿಡಿ: ನಟ ಸುನೀಲ್ ಶೆಟ್ಟಿ
ಆರ್ಯನ್ ಖಾನ್ ಇವತ್ತು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದು, ಎನ್‍ಸಿಬಿ ಮತ್ತೆ ಆತನ ಕಸ್ಟಡಿ ಕೇಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಶೀಘ್ರವೇ ಶಾರೂಖ್ ಖಾನ್ ಮಗ ಜಾಮೀನಿನಡಿ ಬಿಡುಗಡೆಯಾದರೂ ಅಚ್ಚರಿ ಇಲ್ಲ. ದಾಳಿ ವೇಳೆ ಆರ್ಯನ್ ಖಾನ್ ಬಳಿ ಮಾದಕ ದ್ರವ್ಯ ಪತ್ತೆ ಆಗಿಲ್ಲ. ಆದರೆ ಆತ ದಾಳಿಗೂ ಮೊದಲು ಮಾದಕ ದ್ರವ್ಯ ಸೇವಿಸಿರಬಹುದು ಮತ್ತು ಡ್ರಗ್ಸ್ ಪಾರ್ಟಿಗಾಗಿ ವಾಟ್ಸಾಪ್ ಚ್ಯಾಟ್, ಫೋನ್ ಮೂಲಕ ಸಂಪರ್ಕ ಮಾಡಿರಬಹುದು ಎಂದು ಎನ್‍ಸಿಬಿ ಅನುಮಾನಿಸಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ವಶಕ್ಕೆ ಪಡೆದಿದ್ದೇವೆ: ಎನ್‍ಸಿಬಿ ಮುಖ್ಯಸ್ಥ ಪ್ರಧಾನ್
ದಾಳಿ ವೇಳೆ 13 ಗ್ರಾಂ ಕೊಕೇನ್, 21 ಎನ್‍ಡಿಎಂಎ ಮಾತ್ರೆ, 21 ಗ್ರಾಂ ಚರಸ್ ಮತ್ತು 1.33 ಲಕ್ಷ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ದ್ರವ್ಯ ಹೊಂದಿರುವ, ಮಾದಕ ದ್ರವ್ಯ ಖರೀದಿ, ಸಾಗಾಟ ಆರೋಪದಡಿ ಶಾರೂಖ್ ಪುತ್ರನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಇತ್ತ ಶಾರೂಖ್ ಮನೆಗೆ ನಿನ್ನೆ ತಡ ರಾತ್ರಿ ಸಲ್ಮಾನ್ ಖಾನ್ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಹೈ ಪ್ರೊಫೈಲ್ ಡ್ರಗ್ಸ್ ಕೇಸ್- ಶಾರುಖ್ ಖಾನ್ ಪುತ್ರನಿಗೆ ಬಂಧನ ಭೀತಿ