ಸಮರ್ಜಿತ್‌ ಲಂಕೇಶ್‌, ಸಾನ್ಯಾ ನಟನೆಯ ‘ಗೌರಿ’ ಸಿನಿಮಾ ರಿಲೀಸ್‌ ಆಗೋದು ಯಾವಾಗ?

Public TV
1 Min Read
FotoJet 17

ಇಂದ್ರಜಿತ್ ಲಂಕೇಶ್ (Indrajit Lankesh) ನಿರ್ದೇಶಿಸಿರುವ ‘ಗೌರಿ’ (Gowri Film) ಸಿನಿಮಾ 100 ದಿನಗಳ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಆಗಲಿದೆ ಎಂದು ಗೌರಿ ಚಿತ್ರದ ನಟ ಸಮರ್ಜಿತ್ ಲಂಕೇಶ್ ತಿಳಿಸಿದ್ದಾರೆ. ಇದನ್ನೂ ಓದಿ:‘ಸೀತಾರಾಮ’ ನಟಿಗೆ ಕಿಡಿಗೇಡಿಗಳ ಕಾಟ- ವೈರಲ್ ಆಗ್ತಿದೆ ಡೀಪ್ ಫೇಕ್ ಫೋಟೋ

Gowri 3

ಮಂಡ್ಯದಲ್ಲಿ ಸಮರ್ಜಿತ್ ಮಾತನಾಡಿ, ನೈಜ ಘಟನೆ ಆಧಾರಿತ ಕಥೆ ಇರುವ ಈ ಚಿತ್ರವನ್ನು ನಮ್ಮ ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಎಂಟು ಹಾಡುಗಳಿದ್ದು, ಈ ಹಾಡುಗಳಲ್ಲಿ ಕೆಲವು ಹಾಡುಗಳು ಸೂಪರ್ ಹಿಟ್ ಆಗಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ನಮ್ಮ ಚಟ ಚಟ್ಟ ಹತ್ತಿಸುವವರೆಗೂ ಇರಬಾರದು- ದರ್ಶನ್‌ಗೆ ಉಮಾಪತಿ ಟಾಂಗ್

Gowri 3

ತಮ್ಮ ಜೊತೆ ಸಾನ್ಯಾ ಅಯ್ಯರ್ (Saanya Iyer) ಅವರು ನಾಯಕಿಯಾಗಿ ಪರಿಚಯ ಆಗುತ್ತಿದ್ದಾರೆ. ಈ ಚಿತ್ರ ಬಹುತಾರಾಗಣವನ್ನು ಒಳಗೊಂಡಿದ್ದು ಬಿಗ್ ಬಜೆಟ್ ಚಿತ್ರವಾಗಿದೆ ಎಂದರು. ಚಿತ್ರದಲ್ಲಿ 80 ಕಲಾವಿದರು ನಟಿಸಿದ್ದು, ರಮಣೀಯ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಡುಗಳು ಉತ್ತಮವಾಗಿ ಮೂಡಿ ಬಂದಿದೆ. ಐದು ಮಂದಿ ಸಂಗೀತ ನಿರ್ದೇಶಕರು ಈ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆಯಾಗಲಿದ್ದು, ಜನತೆ ಈ ಚಿತ್ರವನ್ನು ವೀಕ್ಷಿಸುವ ಮೂಲಕ ಪ್ರೋತ್ಸಾಹಿಸುವಂತೆ ಮನವಿ ಮಾಡಿದ್ದಾರೆ ಇಂದ್ರಜಿತ್ ಪುತ್ರ. ಕಿರುತೆರೆಯ ಪುಟ್ಟ ಗೌರಿ ಜೊತೆ ಸಮರ್ಜಿತ್ ಅದೃಷ್ಟ ಪರೀಕ್ಷೆಗಿಳಿದಿದ್ದು, ಗೆದ್ದು ಬೀಗುತ್ತಾರಾ ಕಾಯಬೇಕಿದೆ.

Share This Article