ಗಣಪ, ಕರಿಯಾ-2 ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಸರುಗಳಿಸಿದ್ದ ನಟ ಸಂತೋಷ್ ಬಾಲರಾಜ್ (Santosh Balaraj) ಅವರ ಅಂತ್ಯಕ್ರಿಯೆ ಇಂದು (ಆ.6) ಆನೇಕಲ್‌ನಲ್ಲಿ ನೆರವೇರಿತು.
ನಟ ಸಂತೋಷ್ ಬಾಲರಾಜ್ ಅವರ ಹುಟ್ಟೂರು ಆನೇಕಲ್ (Anekal) ಪಟ್ಟಣದ ಸಂತವನ ಚಿನ್ನಪ್ಪನವರ ಪುಣ್ಯಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗಿತ್ತು. ಫಾದರ್ ಶಾಂತರಾಜು ಥಾಮಸ್ ಅವರು ಪಾರ್ಥಿವ ಶರೀರಕ್ಕೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಅಂತಿಮ ವಿಧಿ-ವಿಧಾನ ಪೂರ್ಣಗೊಳಿಸಿದರು. ಕ್ರಿಶ್ಚಿಯನ್ ಸಂಪ್ರದಾಯದಂತೆ ತಂದೆಯ ಸಮಾಧಿ ಪಕ್ಕದಲ್ಲಿಯೇ ನಟ ಸಂತೋಷ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.ಇದನ್ನೂ ಓದಿ: ಪ್ರಸಾದ್ ಯೋಜನೆಯಡಿ ಕೊಲ್ಲೂರು ದೇವಸ್ಥಾನ ಸೇರಿಸಿ: ನಿರ್ಮಲಾ ಸೀತಾರಾಮನ್‌ಗೆ ಬಿ.ವೈ.ರಾಘವೇಂದ್ರ ಮನವಿ
ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಬಳಿಕ ಸಂತೋಷ್ ಅವರು ತೀವ್ರವಾಗಿ ಅಸ್ವಸ್ಥರಾಗಿದ್ದರು. ಮತ್ತೆ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ (ಆ.5) ನಿಧನರಾದರು.
ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ