ಕನ್ನಡದ ಹಿಟ್ ಸಿನಿಮಾ ಅಮೃತವರ್ಷಿಣಿ (Amrutavarshini) ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಶರತ್ ಬಾಬು (Sharat Babu) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಅಂತ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್ (Hyderabad) ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎನ್ನುವ ಮಾಹಿತಿ ಇದೆ.
Advertisement
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಮತ್ತಷ್ಟು ಹದಗೆಟ್ಟ ಪರಿಣಾಮ ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರ ಮಾಡುವ ಕುರಿತು ವೈದ್ಯರು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನುವ ಮಾತೂ ಇದೆ. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ
Advertisement
Advertisement
ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ಅಮೃತವರ್ಷಿಣಿ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದ್ದು.