ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಅಲ್ಲಿಂದ ಹೊರ ಬಂದಿದ್ದ ನಟ ಶಶಿಕುಮಾರ್ (Shashikumar), ಇಂದು ಬೆಂಗಳೂರಿನಲ್ಲಿ ಬಿಜೆಪಿ ಪಕ್ಷ ಸೇರಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai), ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಮ್ಮುಖದಲ್ಲಿ ಬಿಜೆಪಿ ಸೇರಿಕೊಂಡಿರುವ ಶಶಿಕುಮಾರ್, ತಾವು ನರೇಂದ್ರ ಮೋದಿ (Narendra Modi) ಅವರ ಕಾರ್ಯವೈಖರಿ ಮೆಚ್ಚಿ ಈ ಪಕ್ಷವನ್ನು ಸೇರಿರುವುದಾಗಿ ಹೇಳಿದ್ದಾರೆ.
Advertisement
ಸಿನಿಮಾ ರಂಗದ ಜೊತೆ ಜೊತೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಶಶಿಕುಮಾರ್, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಮತ್ತು ಗೆಲುವನ್ನೂ ಕಂಡಿದ್ದಾರೆ. ಇದೀಗ ಮತ್ತೆ ಸಕ್ರೀಯವಾಗಿ ರಾಜಕಾರಣದಲ್ಲೇ ಉಳಿಯುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಇಂದು ಬಿಜೆಪಿ ಪಕ್ಷ ಸೇರ್ಪಡೆಗೊಂಡ ನಂತರ ತಮ್ಮ ರಾಜಕೀಯ ನಿಲುವುಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ಇದನ್ನೂ ಓದಿ:ಡಯಟ್ ಕಾರಣದಿಂದಾಗಿ ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ?
Advertisement
Advertisement
ಬಿಜೆಪಿ (BJP) ಸೇರ್ಪಡೆಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿರುವ ಶಶಿಕುಮಾರ್, ‘ನಾನು ಇಲ್ಲಿ ಟಿಕೆಟ್ ಕೇಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಬಗ್ಗೆ ಮೆಚ್ಚಿ ಬಂದಿದ್ದೇನೆ. ಸಿಎಂ ಕೂಡ SC, ST ಸಮುದಾಯಕ್ಕೆ ನೀಡಿದ ಕೊಡುಗೆ ನೋಡಿ ಬಂದೆ. ಮೀಸಲಾತಿ ವಿಚಾರವಾಗಿ ಬಹು ವರ್ಷದ ಬೇಡಿಕೆ ಈಡೇರಿಸಿದ್ದಾರೆ ಮುಖ್ಯಮಂತ್ರಿಗಳು ಎಂದಿದ್ದಾರೆ.
Advertisement
ಅಲ್ಲದೇ ಶಶಿಕುಮಾರ್ ಚಳ್ಳಕೆರೆ ವಿಧಾನಸಭೆ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದ್ದು, ಈ ಕುರಿತೂ ಅವರು ಪ್ರತಿಕ್ರಿಯೆ ನೀಡಿದ್ದು, ‘ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಸನ್ಯಾಸಿಯಲ್ಲ, ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಟಿಕೆಟ್ ಕೊಟ್ರೆ ಸ್ಪರ್ಧಿಸುವ ಉತ್ಸಾಹ ಇದೆ’ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ತಾವು ಚಳ್ಳಕೆರೆ ಟಿಕೆಟ್ ಆಕಾಂಕ್ಷಿ ಎನ್ನುವುದನ್ನೂ ಪರೋಕ್ಷವಾಗಿ ತಿಳಿಸಿದ್ದಾರೆ.