ಚಾಮರಾಜನಗರ: ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ (Shiva Rajkumar) ಅವರಿಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಯಶಸ್ವಿಯಾಗಿ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮಲೆ ಮಹದೇಶ್ವರನ (Male Mahadeshwara Temple) ಮೊರೆ ಹೋಗಿದ್ದಾರೆ.
ಮೈಸೂರಿನ ಕೆ.ಜಿ.ಕೊಪ್ಪಲಿನ ಶಿವು ಹಾಗೂ ಸ್ನೇಹಿತರು ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಕೆ.ಜಿ.ಕೊಪ್ಪಲಿನ ಶಿವು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವ ಅಷ್ಟೋತರ ಬಿಲ್ವಾರ್ಚನೆ ಪೂಜೆ ಮಾಡಿಸಿದ್ದಾರೆ. ಇವರಿಗೆ ಸ್ನೇಹಿತರಾದ ದರ್ಶನ್, ಅಭಿರಾಜ್, ಮನೋಹರ್, ಟಿ ನಾರಾಯಣ್ ಶಿವಮಲ್ಲು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಭಗವಂತ ನನ್ನಷ್ಟೂ ಆಯಸ್ಸನ್ನ ಶಿವಣ್ಣನಿಗೇ ಕೊಡಲಿ: ಧ್ರುವ ಸರ್ಜಾ
ಇದಲ್ಲದೆ, ದೇವಸ್ಥಾನದ ಸುತ್ತಲೂ ಮೂರು ಬಾರಿ ಉರುಳು ಸೇವೆ ಮಾಡಿ ಕೇಶ ಮುಂಡನೆ ಮಾಡಿಸುವ ಮೂಲಕ ವಿಶೇಷವಾಗಿ ಹರಕೆ ಸಲ್ಲಿಸಿದ್ದಾರೆ. ‘ಭೈರತಿ ರಣಗಲ್’ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅವರು ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಭರ್ಜರಿ ಸ್ವಾಗತ ಕೋರಿ ಚಿತ್ರ ಶತದಿನೋತ್ಸವ ಪೂರೈಸಲೆಂದು ಶುಭ ಕೋರಿದ್ದರು.
ಶಿವರಾಜ್‌ಕುಮಾರ್ ಅವರು ಶಸ್ತ್ರಚಿಕಿತ್ಸೆಗೆ ಅಮೆರಿಕಗೆ ತೆರಳುತ್ತಿದ್ದಾಗಲು ಶಿವು ತಂಡ ಏರ್ಪೋರ್ಟ್‌ಗೆ ಭೇಟಿ ನೀಡಿ ಬೀಳ್ಕೊಡುಗೆ ಮಾಡಿ ವಾಪಸ್ ತೆರಳಿದ್ದರು. ಇದನ್ನೂ ಓದಿ: ಚಿಕಿತ್ಸೆಗಾಗಿ ಅಮೆರಿಕಗೆ ತೆರಳುವ ಮುನ್ನ ಶಿವಣ್ಣ ಭಾವುಕ