ನಟ ಶಿವಣ್ಣ (Shivarajkumar) ‘A for ಆನಂದ್’ ಚಿತ್ರದ ಮುಹೂರ್ತ ಇಂದು (ಮೇ.2) ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ಜರುಗಿದೆ. ನಿರ್ಮಾಪಕಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಇದನ್ನೂ ಓದಿ:ಮತ್ತೆ ಚರ್ಚೆಗೆ ಗ್ರಾಸವಾಯ್ತು ಕಾರ್ತಿಕ್ ಆರ್ಯನ್, ಶ್ರೀಲೀಲಾ ಡೇಟಿಂಗ್ ವಿಚಾರ- ವಿಡಿಯೋ ವೈರಲ್
‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ ವಿಶೇಷವಾಗಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಶಿವಣ್ಣ, ಘೋಸ್ಟ್ ಚಿತ್ರದ ಬಳಿಕ ಶ್ರೀನಿ ಜೊತೆ ಇದು 2ನೇ ಸಿನಿಮಾ. ಮಕ್ಕಳನ್ನು ಯಾವ ರೀತಿ ಓದಿಸಬೇಕು, ಅವರನ್ನು ದಾರಿಗೆ ಹೇಗೆ ತರಬೇಕು ಅನ್ನೋದೇ ‘A for ಆನಂದ್’ ಕಥೆ ತಿರುಳು. ಸ್ಕ್ರೀನ್ ಪ್ಲೇಯನ್ನು ಶ್ರೀನಿ ತುಂಬಾ ಚೆನ್ನಾಗಿ ಮಾಡಿದ್ದಾರೆ. ಅಕ್ಟೋಬರ್ ತಿಂಗಳಾತ್ಯಂಕ್ಕೆ ಶೂಟಿಂಗ್ ಶುರುವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ:ಕನ್ನಡಿಗರಲ್ಲಿ ಕ್ಷಮೆಯಾಚಿಸಿ: ಸೋನು ನಿಗಮ್ ವಿವಾದಾತ್ಮಕ ಹೇಳಿಕೆಗೆ ಕನ್ನಡ ನಿರ್ಮಾಪಕನ ಆಕ್ರೋಶ
ನಿರ್ಮಾಪಕಿ ಗೀತಾ ಶಿವರಾಜ್‌ಕುಮಾರ್, ತುಂಬಾ ದಿನದಿಂದ ಮಕ್ಕಳ ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ಮಕ್ಕಳಿಗೆ ಶಿಕ್ಷಣ ಮುಖ್ಯ. ಆದರೆ ಇಂದು ಅವರಿಗೆ ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ಒತ್ತಡ ಇಲ್ಲದೇ ಮಕ್ಕಳಿಗೆ ಯಾವ ರೀತಿ ಪಾಠ ಹೇಳಿಕೊಡಬಹುದು ಅನ್ನೋದನ್ನು ಈ ಸಿನಿಮಾ ಮೂಲಕ ಹೇಳುತ್ತೇವೆ. ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡುತ್ತಾರೆ. ʻA for ಆನಂದ್’ ಚಿತ್ರದ ಟೈಟಲ್ ತುಂಬಾ ಇಷ್ಟವಾಯ್ತು. ಈ ಚಿತ್ರದಿಂದ ಪೋಷಕರು ಮಕ್ಕಳನ್ನು ಹೇಗೆ ಓದಿಸಬೇಕು ಅಂತ ತಿಳಿದುಕೊಳ್ಳುತ್ತಾರೆ. ಜೊತೆಗೆ ಈ ಸಿನಿಮಾದಿಂದ ಜನ ಥಿಯೇಟರ್‌ಗೆ ಬರುವ ರೀತಿ ಆಗುತ್ತದೆ ಎಂಬ ನಂಬಿಕೆ ಇದೆ ಎಂದರು.
ನಿರ್ದೇಶಕ ಶ್ರೀನಿ ಮಾತನಾಡಿ, ‘ಘೋಸ್ಟ್’ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ, ಇದು ಕಂಪ್ಲೀಟ್ ಡಿಫರೆಂಟ್ ಜಾನರ್ ಚಿತ್ರ ‘A for ಆನಂದ್’. ಫ್ಯಾಮಿಲಿ ಮನರಂಜನೆ ಜೊತೆಗೆ ಮಕ್ಕಳಿಗೂ ಕನೆಕ್ಟ್ ಆಗುವ ಸಿನಿಮಾ. ಇದು ಚಾಲೆಂಜಿಂಗ್ ಕೆಲಸ. ಅಕ್ಟೋಬರ್ ಸಮಯದಲ್ಲಿ ಶಿವಮೊಗ್ಗದ ಸಾಗರದ ಆ ಕಡೆ ಚಿತ್ರೀಕರಿಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.
ಈ ಹಿಂದೆ ಶಿವಣ್ಣಗಾಗಿ ‘ಘೋಸ್ಟ್’ ಹೆಸರಿನ ಭರ್ಜರಿ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿ, ಈಗ ಶಿವಣ್ಣನ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಎ ಫಾರ್ ಆನಂದ್’ ಸಿನಿಮಾದಲ್ಲಿ ಶಿವಣ್ಣ ಒಬ್ಬ ಶಿಕ್ಷಕನ ಪಾತ್ರ ನಿರ್ವಹಿಸಲಿದ್ದಾರೆ.
ಈ ಸಿನಿಮಾವನ್ನು ಶಿವಣ್ಣನವರ ಹೋಮ್ ಬ್ಯಾನರ್ ಆಗಿರುವ ಗೀತಾ ಪಿಕ್ಚರ್ಸ್ ವತಿಯಿಂದಲೇ ನಿರ್ಮಾಣ ಮಾಡಲಾಗುತ್ತಿದೆ. ವೇದ, ಭೈರತಿ ರಣಗಲ್ ಅನ್ನು ಇದೇ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣ ಮಾಡಲಾಗಿತ್ತು, ಗೀತಾ ಪಿಕ್ಚರ್ಸ್‌ಗೆ ಇದು 3ನೇ ಸಿನಿಮಾ. ಶಿವಣ್ಣ ಹಾಗೂ ಶ್ರೀನಿ ಕಾಂಬಿನೇಷನ್ ‘ಘೋಸ್ಟ್’ ಸಿನಿಮಾಕ್ಕೆ ಕೆಲಸ ಮಾಡಿದ್ದ ಚಿತ್ರ ಹಾಗೂ ತಾಂತ್ರಿಕ ತಂಡವೇ ಈ ಸಿನಿಮಾಕ್ಕೂ ಕೆಲಸ ಮಾಡಲಿದೆ. ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿಎಂ ಸಂಭಾಷಣೆ ಬರೆದಿದ್ದಾರೆ. ವಾಸುಕಿ ವೈಭವ್ ಸಂಗೀತ ಒದಗಿಸಲಿದ್ದಾರೆ.