ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!

Public TV
1 Min Read
shivanna kamal haasan

ಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದ ನಟ ಕಮಲ್ ಹಾಸನ್ (Kamal Haasan) ವಿಚಾರದ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಶಿವಣ್ಣರನ್ನು (Shivanna) ಪ್ರಶ್ನಿಸಿದ್ದಕ್ಕೆ ಅವರು ಕೈಮುಗಿದಿದ್ದಾರೆ. ಇದನ್ನೂ ಓದಿ:ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್

shivanna

ಇಂದು (ಮೇ 31) ‘ಕಣ್ಣಪ್ಪ’ ಚಿತ್ರದ ಪ್ರಚಾರಕ್ಕಾಗಿ ಮೋಹನ್ ಬಾಬು, ವಿಷ್ಣು ಮಂಚು ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ಕಾರ್ಯಕ್ರಮಕ್ಕೆ ಶಿವಣ್ಣ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ, ಕಮಲ್ ಹಾಸನ್ ಕಾಂಟ್ರವರ್ಸಿ ಬಗ್ಗೆ ಕೇಳಿದ್ದಕ್ಕೆ ಕೈಮುಗಿದು ನಮಸ್ಕರಿಸುತ್ತಾ ತೆರಳಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿದೆ. ಇದನ್ನೂ ಓದಿ:ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ

Shivarajkumar Kamal Haasanತಮಿಳು ನಟ ಮಾತಾಡಿರೋದರ ಬಗ್ಗೆ ತಪ್ಪು ಎಂದು ಎಲ್ಲೂ ಶಿವಣ್ಣ ಹೇಳುತ್ತಿಲ್ಲವಲ್ಲ ಎಂದು ಅಭಿಮಾನಿಗಳಲ್ಲಿ ಬೇಸರ ಮೂಡಿದೆ. ಇಷ್ಟೆಲ್ಲಾ ಆದ ಮೇಲೆಯೂ ಶಿವಣ್ಣ ಮೌನವಹಿಸಿರೋದ್ಯಾಕೆ? ಕಮಲ್ ಬಗ್ಗೆ ಕೇಳ್ತಿದ್ದಂತೆ ಕೈಮುಗಿದು ಹೋಗಿದ್ದು ಯಾಕೆ. ಹಾಗಾದ್ರೆ ಕಮಲ್ ಮಾಡಿದ್ದು ಸರಿ ಅಂತನಾ? ತಪ್ಪು ಅಂತನಾ ಎಂದೆಲ್ಲಾ ಪ್ರಶ್ನಿಸುತ್ತಿದ್ದಾರೆ. ಶಿವಣ್ಣ ಉತ್ತರದ ನಿರೀಕ್ಷೆಯಲ್ಲಿದ್ದ ಫ್ಯಾನ್ಸ್‌ಗೆ ನಿರಾಸೆ ಆಗಿದೆ.

ಇದೆಲ್ಲದರ ನಡುವೆ ಹೇಳಿಕೆ ಬಗ್ಗೆ ನಾನು ಬದ್ಧನಾಗಿದ್ದೇನೆ ಎಂದ ಕಮಲ್‌ಗೆ ಕನ್ನಡಪರ ಸಂಘಟನೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗುತ್ತಿದೆ.

kamal haasan

ನಿನ್ನೆ (ಮೇ 30) ಮತ್ತೆ ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು. ಅಲ್ಲದೇ ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದಿದ್ದರು. ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ.

Share This Article