ಇತ್ತೀಚಿನ ದಿನಗಳಲ್ಲಿ ರಾಜಕೀಯ ಮುಖಂಡರ ಜೊತೆ ಪದೇ ಪದೇ ಭೇಟಿ ಮಾಡುತ್ತಿದ್ದಾರೆ ನಟ ಶಿವರಾಜ್ ಕುಮಾರ್ (Shivraj Kumar). ಜೊತೆಗೆ ರಾಜಕೀಯ ಸಮಾರಂಭಗಳಲ್ಲೂ ಅವರು ಭಾಗಿಯಾಗುತ್ತಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದರು. ಜೊತೆಗೆ ಶಿವರಾಜ್ ಕುಮಾರ್ ಪತ್ನಿ ಗೀತಾ (Geetha) ಕಾಂಗ್ರೆಸ್ ಪಕ್ಷಕ್ಕೂ ಸೇರ್ಪಡೆಯಾದರು.
Advertisement
ಮಧು ಬಂಗಾರಪ್ಪ (Madhu Bangarappa), ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಪರವಾಗಿ ಪ್ರಚಾರ ಮಾಡಿ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದ ಶಿವರಾಜ್ ಕುಮಾರ್ ಭೇಟಿಯಾಗಿ ಕಾಂಗ್ರೆಸ್ ಮುಖಂಡ ಸುರ್ಜೆವಾಲಾ ಸ್ವತಃ ಶಿವಣ್ಣ ಮನೆಗೆ ಬಂದಿದ್ದರು. ಆನಂತರ ಸಂಬಂಧಿ ಮಧು ಬಂಗಾರಪ್ಪ ಮಂತ್ರಿಯಾದರು. ಮಧು ಮಂತ್ರಿಯಾಗಿದ್ದರ ಹಿಂದೆ ಶಿವರಾಜ್ ಕುಮಾರ್ ಪ್ರಭಾವವೂ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಬಾಲಿವುಡ್ ಚಿತ್ರಗಳ ಫ್ಲಾಪ್ ಬಳಿಕ ರಶ್ಮಿಕಾ ನಟನೆ 3ನೇ ಚಿತ್ರದ ಟೀಸರ್ ರಿಲೀಸ್
Advertisement
Advertisement
ನಿರಂತರ ಚಿತ್ರೀಕರಣ ಮಧ್ಯೆಯೂ ಶಿವರಾಜ್ ಕುಮಾರ್, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇತ್ತೀಚೆಗಷ್ಟೇ ನಡೆದ ಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲೂ ಶಿವಣ್ಣ ಪತ್ನಿ ಸಮೇತ ಹಾಜರಿದ್ದರು. ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸ್ವತಃ ಕಾರು ಡ್ರೈವ್ ಮಾಡಿಕೊಂಡು ಬಂದಿದ್ದರು ಶಿವರಾಜ್ ಕುಮಾರ್.
Advertisement
ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಪತ್ನಿ ಗೀತಾ ಅವರ ಜತೆ ಬಂದು ಸಿಎಂ ಭೇಟಿ ಮಾಡಿದ ನಟ ಶಿವರಾಜ್ ಕುಮಾರ್, ಕೆಲ ಹೊತ್ತು ಅವರೊಂದಿಗೆ ಮಾತನಾಡಿದ್ದಾರೆ. ಮಾತುಕತೆ ಬಳಿಕ ಹೊರ ಬಂದ ಅವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಪ್ರತಿಕ್ರಿಯೆ ಕೊಡದೇ ತೆರಳಿದರು. ಶಿವಣ್ಣ ದಂಪತಿ ಜೊತೆ ಸಚಿವ ಮಧು ಬಂಗಾರಪ್ಪ ಕೂಡ ಆಗಮಿಸಿದ್ದರು.