ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ (Shiva Rajkumar) ಅವರು ಅಮೆರಿಕದಲ್ಲಿ ಸರ್ಜರಿ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ನಟ ಶಿವಣ್ಣಗೆ ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್‌ನಲ್ಲಿ ಸರ್ಜರಿ ನಡೆದಿತ್ತು. ಯಶಸ್ವಿ ಸರ್ಜರಿ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಸರ್ಜರಿ ಬಳಿಕ ಎರಡು ಚೆಕಪ್ ಬಾಕಿ ಇದ್ದು, ನಂತರ ಸಂಪೂರ್ಣ ಗುಣಮುಖರಾಗಿ ಜ.24ರ ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್ ಗೆದ್ದ ಶಿವಣ್ಣ- ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ನಟ
Advertisement
Advertisement
ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾದ ಶಿವಣ್ಣ ಕೆಲ ದಿನಗಳ ಹಿಂದಷ್ಟೇ ಅಭಿಮಾನಿಗಳಿಗೆ ವೀಡಿಯೋ ಸಂದೇಶ ಕಳುಹಿಸಿದ್ದರು. ಕ್ಯಾನ್ಸರ್‌ನಿಂದ ಗುಣಮುಖರಾಗಿರುವ ಬಗ್ಗೆ ಸಂತಸ ಹಂಚಿಕೊಂಡಿದ್ದರು. ಶೀಘ್ರವೇ ಬೆಂಗಳೂರಿಗೆ ವಾಪಸ್ ಆಗಿ ಸಿನಿಮಾ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು.
Advertisement
Advertisement
ತನಗೆ ಚಿಕಿತ್ಸೆ ನೀಡಿದ ವೈದ್ಯರು, ಈ ವೇಳೆ ಜೊತೆಗೆ ನಿಂತು ಧೈರ್ಯ ತುಂಬಿದ ಆಪ್ತರು ಮತ್ತು ತನಗಾಗಿ ಪ್ರಾರ್ಥಿಸಿದ ಸಮಸ್ತ ಅಭಿಮಾನಿಗಳಿಗೂ ಶಿವಣ್ಣ ಕೃತಜ್ಞತೆ ಸಲ್ಲಿಸಿದ್ದರು. ಇದನ್ನೂ ಓದಿ: ಶಿವಣ್ಣನ ಮನೆ ನಾಯಿ ʻನೀಮೋʼ ನಿಧನ – ಕರುಳು ಹಿಂಡುವ ಪತ್ರ ಬರೆದ ಗೀತಾ ಶಿವರಾಜ್‌ಕುಮಾರ್