Connect with us

Bengaluru City

ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಶಿವಣ್ಣ

Published

on

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವ್ಯಕ್ತಿಯೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ಬಳಿಕ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧನಿಗೆ ನೀಡಿದ್ದಾರೆ.

ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡಿದ್ದಾರೆ. ಸದ್ಯ ಶಿವಣ್ಣ ಕಾರು ನಿಲ್ಲಿಸಿ ಹಣ ಕೊಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಶಿವಣ್ಣ ‘ಆಯುಷ್ಮಾನ್ ಭವ’ ಚಿತ್ರದಲ್ಲಿ ನಟಿಸಿದ್ದು, ಸಿನಿಮಾ ಬಿಡುಗಡೆಯಾಗಲು ರೆಡಿಯಾಗಿದೆ. ಈ ಸಿನಿಮಾದಲ್ಲಿ ಶಿವಣ್ಣನಿಗೆ ನಾಯಕಿಯಾಗಿ ಡಿಂಪಲ್ ಬೆಡಗಿ ರಚಿತಾ ರಾಮ್ ನಟಿಸಿದ್ದಾರೆ. ಈ ಚಿತ್ರವನ್ನು ಹಿರಿಯ ನಟ ದ್ವಾರಕೀಶ್ ಅವರು ನಿರ್ಮಿಸಿದ್ದಾರೆ.

Click to comment

Leave a Reply

Your email address will not be published. Required fields are marked *