ಜುಲೈ 12ರಂದು ಹುಟ್ಟುಹಬ್ಬ ಆಚರಿಸ್ತಿಲ್ಲ ಶಿವಣ್ಣ

Public TV
1 Min Read
shivarajkumar 1

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಈ ವರ್ಷ ಅಂದರೆ ಜುಲೈ 12ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ.

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಿವರಾಜ್‍ಕುಮಾರ್ ಅವರು, ಹುಟ್ಟುಹಬ್ಬ ಮಾಡುತ್ತಿಲ್ಲ ಎಂದು ಅಲ್ಲ. ಆ ದಿನ ನನ್ನ ಶಸ್ತ್ರಚಿಕಿತ್ಸೆ ಇದೆ. ನನಗೆ ಭುಜದ ನೋವು ಆಗಾಗ ಕಾಣಿಸುತ್ತಿದೆ. ಹಾಗಾಗಿ ನಾನು ಶಸ್ತ್ರಚಿಕಿತ್ಸೆಗೆ ಹೋಗಬೇಕಾಗುತ್ತೆ. ಹುಟ್ಟುಹಬ್ಬ ನಂತರ ಹೋಗೋಣ ಎಂದುಕೊಂಡೆ. ಆದರೆ ನನಗೆ ಬೇರೆ ದಿನ ಅಪಾಯಿಂಟ್‍ಮೆಂಟ್ ಸಿಗಲಿಲ್ಲ. ಇದನ್ನು ಮಿಸ್ ಮಾಡಿದ್ರೆ ಅಗಸ್ಟ್ ವರೆಗೂ ಕಾಯಬೇಕು. ಹಾಗಾಗಿ ನಾನು ಲಂಡನ್‍ಗೆ ಹೋಗಲೇಬೇಕು ಎಂದರು.

tmk shivarajkumar 3

ಅಗಸ್ಟ್ ವರೆಗೂ ಕಾಯಬೇಕೆಂದರೆ ನೋವು ಜಾಸ್ತಿ ಆಗುತ್ತೆ. ಆಗ ನನ್ನ ಸಮಸ್ಯೆ ಜಾಸ್ತಿ ಆಗುತ್ತದೆ. ಅಭಿಮಾನಿಗಳಿಗೆ ಈ ಬಗ್ಗೆ ಗೊತ್ತು. ಅವರು ಕೂಡ ಆರೋಗ್ಯ ಮುಖ್ಯ ಹೋಗಿ ಬನ್ನಿ ಎಂದು ಹೇಳಿದ್ದಾರೆ. ನಾನು ಕೂಡ ನನ್ನ ಹುಟ್ಟುಹಬ್ಬವನ್ನು ಮಿಸ್ ಮಾಡಿಕೊಳ್ಳುತ್ತೇನೆ. ಏಕೆಂದರೆ ಅವರು ನನ್ನ ಹುಟ್ಟುಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತಾರೋ, ನನಗೂ ಹಾಗೇ ಅವರ ಹುಟ್ಟುಹಬ್ಬ ಆಚರಿಸುವುದು ಸಂಭ್ರಮನೇ. ಅವರು ಮಿಸ್ ಮಾಡಿಕೊಂಡರೆ ನಾನು ಡಬಲ್ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

shivaraj kumar

ನನ್ನ ಹುಟ್ಟುಹಬ್ಬಕ್ಕೆ ಸ್ವಲ್ಪ ರೇಗಾಟ, ಪ್ರೀತಿ, ಊಟ ಇರುತ್ತೆ. ಎಲ್ಲರೂ ಹಾಗೂ ಚಿತ್ರರಂಗದ ಸದಸ್ಯರು ಬಂದು ಶುಭಾಶಯ ತಿಳಿಸುತ್ತಾರೆ. ನಾನು ಇಲ್ಲಿ ಇಲ್ಲ ಎಂದರು ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸುತ್ತಾರೆ. ಹಾಗಾಗಿ ನಾನು ಲಂಡನ್‍ನಿಂದ ಹಿಂತಿರುಗಿ ಬಂದ ನಂತರ ಒಂದು ಗೆಟ್- ಟು-ಗೆದರ್ ಮಾಡುತ್ತೇನೆ ಎಂದು ನಟ ಶಿವರಾಜ್‍ಕುಮಾರ್ ತಿಳಿಸಿದರು.

ನನಗೆ ಭುಜದ ನೋವಿದೆ. ನನಗೆ ಚಿಕಿತ್ಸೆ ನೀಡಿದ್ದ ವೈದ್ಯರೇ ಶಾರೂಕ್ ಖಾನ್ ಹಾಗೂ ಎಸ್. ಎಂ ಕೃಷ್ಣ ಅವರಿಗೂ ಚಿಕಿತ್ಸೆ ನೀಡುತ್ತಿದ್ದಾರೆ. ಸರ್ಜರಿ ಮಾಡಿದ ಬಳಿಕ ನಾಲ್ಕು ತಿಂಗಳು ಆ್ಯಕ್ಷನ್ ಸೀನ್ ಮಾಡಬಾರದು. ನಾಲ್ಕು ತಿಂಗಳ ಮೇಲೆಯೇ ಆ್ಯಕ್ಷನ್ ಸೀನ್ ಮಾಡಲಿದ್ದೇನೆ. ಚಿಕ್ಕ ಪುಟ್ಟ ಆ್ಯಕ್ಷನ್ ಸೀನ್ ಮಾಡಬಹುದು. ಬಳಿಕ ‘ಭಜರಂಗಿ- 2’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಸೀನ್ ಇದೆ. ಆ ಚಿತ್ರೀಕರಣದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಶಿವರಾಜ್‍ಕುಮಾರ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *