– ಭರ್ಜರಿ ಸ್ವಾಗತಕ್ಕೆ ಸಿದ್ಧವಾಗಿದೆ 500 ಕೆಜಿ ಹೂವು
ಬೆಂಗಳೂರು: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಇಂದು (ಜ 26) ಶಿವಣ್ಣ ತಾಯ್ನಾಡಿಗೆ ಬಂದಿಳಿದಿದ್ದಾರೆ.
Advertisement
ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. ಬಳಿಕ ಡಿ.34 ರಂದು ಆಪರೇಷನ್‌ಗೆ ಒಳಗಾಗಿದ್ದು, ಇತ್ತೀಚಿಗಷ್ಟೇ ಶಿವಣ್ಣ ತಾಯ್ನಾಡಿಗೆ ಬರುವ ಸಿಹಿ ಸುದ್ದಿಯನ್ನು ಸ್ವತಃ ವಿಡಿಯೋ ಮೂಲಕ ಹಂಚಿಕೊಂಡಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿ ತಾಯ್ನಾಡಿಗೆ ಮರಳಿದ್ದಾರೆ.ಇದನ್ನೂ ಓದಿ: ಗಣರಾಜ್ಯೋತ್ಸವ 2025 – ದೇಶದ ಜನತೆಗೆ ಶುಭಕೋರಿದ ಪ್ರಧಾನಿ, ಸಿಎಂ
Advertisement
Advertisement
ಅಮೆರಿಕದಿಂದ ದುಬೈಗೆ ಬಂದಿಳಿದು, ಅಲ್ಲಿಂದ ಕನೆಕ್ಟೆಡ್ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಿಗ್ಗೆ 9ರ ಆಸುಪಾಸಿನಲ್ಲಿ ಬೆಂಗಳೂರಿನ ಏರ್ಪೋಟ್‌ನಲ್ಲಿ ಲ್ಯಾಂಡ್ ಆಗಿದ್ದು, ವಿಮಾನ ನಿಲ್ದಾಣದ ಪ್ರಕ್ರಿಯೆಗಳನ್ನು ಮುಗಿಸಿ ಆಗಮನ ಗೇಟ್ 1ರಲ್ಲಿ ಹೊರಬಂದಿದ್ದಾರೆ.
Advertisement
ಇನ್ನೂ ಮನೆ ಬಳಿ ಶಿವಣ್ಣರನ್ನ ಸ್ವಾಗತಿಸಲು 500ಕೆ.ಜಿ ಹೂಗಳನ್ನ ತಯಾರಿ ಮಾಡಿಕೊಂಡಿರುವ ದೊಡ್ಮನೆ ಅಭಿಮಾನಿಗಳು ಕಾಯುತ್ತಿದ್ದಾರೆ. ಜೊತೆಗೆ ಮೂರು ಜೆಸಿಬಿಗಳ ಮೂಲಕ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರಿಗೆ ಹೂ ಹಾಕಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದು, ನಾಗವಾರದ ನಿವಾಸದ ಬಳಿ ಅಭಿಮಾನಿಗಳು ದಂಡು ಹರಿದು ಬಂದಿದೆ.
ಏರ್‌ಪೋರ್ಟ್ ಬಳಿಯ ಟೋಲ್‌ನಿಂದ ಹಿಡಿದು ನಾಗವಾರದ ಮನೆಯವರೆಗೂ ಶಿವಣ್ಣರನ್ನ ಬರಮಾಡಿಕೊಳ್ಳಲು ಫ್ಯಾನ್ಸ್ ಕಾಯ್ತಿದ್ದಾರೆ. ಶಿವಣ್ಣ ಅವರ ನಿವಾಸದ ಬಳಿ ಅಭಿಮಾನಿಗಳು ಬ್ಯಾನರ್, ಕಟೌಟ್ ಹಾಕಿ ಸ್ವಾಗತ ಮಾಡೋದಕ್ಕೂ ತಯಾರಿ ಮಾಡಿಕೊಂಡಿದ್ದಾರೆ. ಇನ್ನೂ ಸೋಮವಾರ ಶಿವಣ್ಣನ ಮನೆಯಲ್ಲಿ ಹೊಸ ವರ್ಷ ಹಾಗೂ ಸಂಕ್ರಾಂತಿ ಸಂಭ್ರಮ ಒಟ್ಟೊಟ್ಟಿಗೆ ನಡೆಯಲಿದೆ.ಇದನ್ನೂ ಓದಿ: ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಇಂದು ತಾಯ್ನಾಡಿಗೆ ಶಿವಣ್ಣ ವಾಪಸ್