– ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶಿವರಾಜ್ಕುಮಾರ್
ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್ನಲ್ಲಿರುವ ನಟ ಶಿವರಾಜ್ಕುಮಾರ್ (Shivarajkumar) ಕೊನೆಗೂ ತವರಿಗೆ ವಾಪಸ್ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ವಾಪಸ್ ಆಗುವುದಾಗಿ ಶಿವಣ್ಣ ತಿಳಿಸಿದ್ದಾರೆ.
Advertisement
ಬೆಂಗಳೂರಿಗೆ ಬರುವ ಬಗ್ಗೆ ನಟ ಶಿವಣ್ಣ ವೀಡಿಯೋ ಮಾಡಿ ಫ್ಯಾನ್ಸ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಗೆ ಚಿರಋಣಿ ಎಂದು ಅಭಿಮಾನಿಗಳಿಗೆ ನಟ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ತಂದೆಯ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಹೇಳಿದ್ದೇನು?
Advertisement
Advertisement
ವೀಡಿಯೋದಲ್ಲಿ ಏನಿದೆ?
‘ಹಾಯ್.. ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ಪ್ರೀತಿಯ ಶಿವರಾಜ್ಕುಮಾರ್. ನಿಮ್ಮ ಪ್ರೀತಿ ಹಾಗೂ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮೆಲ್ಲರನ್ನೂ ನೋಡುವುದಕ್ಕೆ ನಾನು ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ಬರುತ್ತಿದ್ದೇನೆ’ ಎಂದು ಅಭಿಮಾನಿಗಳಿಗೆ ನಟ ಶಿವರಾಜ್ಕುಮಾರ್ ತಿಳಿಸಿದ್ದಾರೆ.
Advertisement
ಕ್ಯಾನ್ಸರ್ನಿಂದ ಬಳಲುತ್ತಿದ್ದ ಶಿವರಾಜ್ಕುಮಾರ್ ಅವರು ಈಚೆಗೆ ಅಮೆರಿಕಗೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಯುಎಸ್ನ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಕೆಲವು ದಿನಗಳ ಕಾಲ ಅಲ್ಲೇ ಉಳಿದು ವಿಶ್ರಾಂತಿ ಪಡೆದರು. ಈ ವೇಳೆ ಸ್ನೇಹಿತರು, ಆಪ್ತರು, ಅಭಿಮಾನಿಗಳ ಜೊತೆ ಒಡನಾಡಿ ಎಂಜಾಯ್ ಮಾಡಿದರು. ಅಮೆರಿಕದಲ್ಲಿ ಶಿವಣ್ಣನ ಜೊತೆ ಪತ್ನಿ ಗೀತಾ ಶಿವರಾಜ್ಕುಮಾರ್ ಕೂಡ ಇದ್ದಾರೆ. ಈಗ ನಟ ಸಂಪೂರ್ಣ ಚೇತರಿಸಿಕೊಂಡಿದ್ದು, ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಇದನ್ನೂ ಓದಿ: ನಟ ಶಿವರಾಜ್ಕುಮಾರ್ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ – ಮಲೆ ಮಹದೇಶ್ವರ ಮೊರೆಹೋದ ಫ್ಯಾನ್ಸ್