ಹಿಂದಿ ಕಿರುತೆರೆಯ ನಟ ಸಿದ್ಧಾಂತ್ ವೀರ ಸೂರ್ಯವಂಶಿ ಜಿಮ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಏಕಾಏಕಿ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ಆಸ್ಪತ್ರೆಗೆ ಬರುವ ದಾರಿಯಲ್ಲೇ ಸಿದ್ಧಾಂತ್ ಪ್ರಾಣ ಹೋಗಿದೆ ಎಂದು ಹೇಳಲಾಗುತ್ತಿದೆ. ಕೇವಲ 46 ವರ್ಷದ ಮಗನನ್ನು ಕಳೆದುಕೊಂಡ ಕುಟುಂಬ ಕಣ್ಣೀರಿಡುತ್ತಿದೆ.
Advertisement
ಹಿಂದಿ ಕಿರುತೆರೆ ಲೋಕದಲ್ಲಿ ಸಿದ್ಧಾಂತ್ ಸಾಕಷ್ಟು ಹೆಸರು ಮಾಡಿದ್ದಾರೆ. ಹಿಟ್ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇವ ಪತ್ನಿ ಅಲೇಸಿಯಾ ಕೂಡ ಮಾಡೆಲಿಂಗ್ ಕ್ಷೇತ್ರದಲ್ಲಿ ದೊಡ್ಡ ಹೆಸರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 2017ರಲ್ಲಿ ಅಲೇಸಿಯಾ ಮತ್ತು ಸಿದ್ದಾಂತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕಸೌಟಿ ಜಿಂದಗಿ ಕೇ, ಮಮತಾ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಸಿದ್ಧಾಂತ್ ನಟಿಸಿದ್ದಾರೆ. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ
Advertisement
Advertisement
ಸಿದ್ಧಾಂತ್ ಸಾವಿನ ವಿಷಯವನ್ನು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಂಚಿಕೊಂಡಿದ್ದು, ಮೃತರಿಗೆ ಶಾಂತಿ ಕೋರಿದ್ದಾರೆ. ಸಿದ್ಧಾಂತನನ್ನು ಕಳೆದುಕೊಂಡ ಕಲಾ ಪ್ರಪಂಚ ಬಡವಾಗಿದೆ ಎಂದು ಬರೆದುಕೊಂಡಿದ್ದಾರೆ. ಜೀಮ್ ನಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಜಿಮ್ ಪ್ರಿಯರಿಗೆ ಕಳವಳವನ್ನುಂಟು ಮಾಡಿದೆ.