ದಕ್ಷಿಣ ಭಾರತದ ಹೆಸರಾಂತ ನಟ ಸಿದ್ದಾರ್ಥ ಹಿಂದಿ ಹೇರಿಕೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ತಮ್ಮೊಂದಿಗೆ ಇಂಗ್ಲಿಷ್ ಮಾತನಾಡದೇ, ಭದ್ರತಾ ಸಿಬ್ಬಂದಿ ಸಾಕಷ್ಟು ಕಿರುಕುಳ ನೀಡಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಮಧುರೈ ವಿಮಾನ ನಿಲ್ದಾಣದಲ್ಲಿ ನಡೆದ ಈ ಘಟನೆಗೆ ತನ್ನ ವಯಸ್ಸಾದ ಪಾಲಕರು ಕೂಡ ಕಿರಿಕಿರಿ ಅನುಭವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
Advertisement
ಮಧುರೈ ವಿಮಾನ ನಿಲ್ದಾಣದಲ್ಲಿ ಸಿ.ಆರ್.ಪಿ.ಎಫ್ ಅಧಿಕಾರಿಗಳು ಸಿದ್ದಾರ್ಥ ಅವರ ತಾಯಿಯ ಬ್ಯಾಗ್‍ನಲ್ಲಿದ್ದ ನಾಣ್ಯಗಳನ್ನು ತಗೆಯುವಂತೆ ಹೇಳಿದ್ದಾರೆ. ಹಿಂದಿ ಬರುವುದಿಲ್ಲ ಇಂಗ್ಲಿಷಿನಲ್ಲಿ ಮಾತನಾಡಿ ಎಂದು ಪದೇ ಪದೇ ಸಿದ್ದಾರ್ಥ ಕೇಳಿಕೊಂಡರೂ, ಅವರು ಹಿಂದಿಯಲ್ಲೇ ಮಾತನಾಡುತ್ತಿದ್ದರಂತೆ. ಇಪ್ಪತ್ತು ನಿಮಿಷಗಳ ಕಾಲ ನಟ ಮತ್ತು ಆತನ ತಂದೆ ತಾಯಿಗೆ ಮಾನಸಿಕ ಹಿಂಸೆ ನೀಡುವಂತೆ ಅಧಿಕಾರಿಗಳು ಮಾತನಾಡಿದರು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ದಿವ್ಯಾಳ ಆಸೆಯಂತೆ ದೊಡ್ಮನೆಗೆ ಎಂಟ್ರಿ ಕೊಟ್ಟ ಅರವಿಂದ್ ಕೆ.ಪಿ
Advertisement
Advertisement
ಸಿದ್ದಾರ್ಥ ಆಗಾಗ್ಗೆ ನರೇಂದ್ರ ಮೋದಿ ಸರಕಾರದ ವಿರುದ್ಧ ಮಾತನಾಡುತ್ತಲೇ ಇರುತ್ತಾರೆ. ಆಳುವ ಸರಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ. ಅನೇಕ ಜನಪರ ಕೆಲಸಗಳಲ್ಲೂ ಅವರು ಭಾಗಿಯಾಗಿದ್ದಾರೆ. ಅದರಲ್ಲೂ ಹಿಂದಿ ಹೇರಿಕೆಯ ವಿರುದ್ಧ ಸಾಕಷ್ಟು ಮಾತನಾಡಿದ್ದಾರೆ. ತಮಗೇ ಆಗಿರುವ ಈ ಕಹಿ ನೋವನ್ನು ಹಂಚಿಕೊಂಡು, ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.