ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ಇಂದು (ಡಿ.17) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ನಟನ ಬರ್ತ್‌ಡೇ ಪ್ರಯುಕ್ತ ‘ಪರಾಕ್’ (Parak) ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಒಂದು ಕೈಯಲ್ಲಿ ಗನ್ ಹಿಡಿದು ಬೆನ್ನು ತೋರಿಸ್ತಿರುವ ಶ್ರೀಮುರಳಿ ಬೆನ್ನಿಗೆ ಪಿಸ್ತೂಲ್ ಹಾಕಿ ಪ್ರತ್ಯಕ್ಷರಾಗಿದ್ದಾರೆ. ಇದನ್ನೂ ಓದಿ:ನಾನಿನ್ನೂ ಜೀವಂತವಾಗಿದ್ದೇನೆ – ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ತಂದೆ ಸ್ಪಷ್ಟನೆ
Advertisement
ನವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
Advertisement
Advertisement
ಮಾರ್ಚ್‌ನಲ್ಲಿ ‘ಪರಾಕ್’ ಚಿತ್ರದ ಶೂಟಿಂಗ್ ಶುರುವಾಗಲಿದೆ. ದೊಡ್ಡ ಬಜೆಟ್, ದೊಡ್ಡ ತಾರಾಗಣದಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರ ಸಜ್ಜಾಗುತ್ತಿದೆ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್ ನಡಿ ‘ಪರಾಕ್’ ಸಿನಿಮಾ ನಿರ್ಮಾಣವಾಗುತ್ತಿದೆ.