ಸ್ಯಾಂಡಲ್‌ವುಡ್ ನಟ ಶ್ರೀಮುರಳಿ (Srimurali) ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಇಂದು (ಅ.8) ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ (Kateel Durgaparameshwari Temple) ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಸಿಕ್ಸ್ ಪ್ಯಾಕ್ ಫೋಟೋ ಹಂಚಿಕೊಂಡ ಸುದೀಪ್
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ನಟ ಶ್ರೀಮುರಳಿ ವಿಶೇಷ ಪೂಜೆ ಸಲ್ಲಿಸಿದರು. ಆ ನಂತರ ಕ್ಷೇತ್ರದ ವತಿಯಿಂದ ಶ್ರೀಮುರಳಿಗೆ ವೆಂಕಟರಮಣ ಆಸ್ರಣ್ಣ ಅವರು ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಬಳಿಕ ಮಾಧ್ಯಮಕ್ಕೆ ಮಾತನಾಡಿದ ನಟ, ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ. ನಾನು ಬಾಲ್ಯದಲ್ಲಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಇದೀಗ ಮತ್ತೆ ಇಲ್ಲಿಗೆ ಬರುವ ಅವಕಾಶ ಸಿಕ್ಕಿದೆ. ಸದ್ಯದಲ್ಲೇ ನಾನು ನಟಿಸಿರುವ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.
ಕರಾವಳಿಯ ನಟರು ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಈ ಬಗ್ಗೆ ಖುಷಿಯಿದೆ, ತುಳು ಚಿತ್ರರಂಗ ಬೆಳೆಯುತ್ತಿದೆ. ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗವು ಮುಂದುವರಿಯಬೇಕು ಎಂದು ಶ್ರೀಮುರಳಿ ಮಾತನಾಡಿದರು.