ಕರಾವಳಿ ಭಾಗದ ಪ್ರತಿಭೆ ಹಾಗೂ ಬಿಗ್‌ಬಾಸ್ ಖ್ಯಾತಿಯ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ತುಳು ಹಾಗೂ ಕನ್ನಡದ `ಜೈ’ (Jai) ಚಿತ್ರದ ಟೀಸರ್ ಬಿಡುಗಡೆ ಇತ್ತೀಚೆಗೆ ನಡೆದಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ನಟ ಶ್ರೀಮುರಳಿ (Srimurali) ಚಿತ್ರದ ಟೀಸರ್ ಅನ್ನ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಬಿಗ್‌ಬಾಸ್ ಮೂಲಕ ಖ್ಯಾತಿ ಪಡೆದಿರುವ ರೂಪೇಶ್ ಶೆಟ್ಟಿ (Rupeesh Shetty) ತುಳು ಭಾಷೆಯ ಸಂಸ್ಕೃತಿ, ಆಚಾರ-ವಿಚಾರದ ಬಗ್ಗೆ ಅಪಾರ ಪ್ರೀತಿಯನ್ನು ಇಟ್ಟುಕೊಂಡು ಸಿನಿಮಾ ಮಾಡುತ್ತಾ ಬಂದಿದ್ದಾರೆ ಎಂದು ನಟ ಶ್ರೀಮುರಳಿ ರೂಪೇಶ್ ಗುಣಗಾನ ಮಾಡಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲುಗು ಸ್ಟಾರ್ ರಾಮ್ ಚರಣ್
ಅಂದಹಾಗೆ ಚಿತ್ರದ ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಅವರ ಮೂರನೆಯ ನಿರ್ದೇಶನದ ಚಿತ್ರ. ಈ ಹಿಂದೆ ಗಿರಿಗಿಟ್, ಸರ್ಕಸ್ ಎಂಬ ಚಿತ್ರದ ನಿರ್ದೇಶನ ಮಾಡಿದ್ದ ರೂಪೇಶ್ ಶೆಟ್ಟಿ, ಇದೀಗ `ಜೈ’ ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್ ಮಾಡಿದ್ದಾರೆ. ಈ ಹಿಂದೆ ಮಾಡಿದ್ದ ಎರಡು ಸಿನಿಮಾಗಳು ಸಕ್ಸಸ್ ಕಂಡಿವೆ. ಅದರಲ್ಲೂ ಈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರಂತೆ. ಇದೊಂದು ಕರಾವಳಿ ಭಾಗದ ಲೋಕಲ್ ಪೊಲಿಟಿಕಲ್ ಕಂಟೆಂಟ್ ಇರುವ ಚಿತ್ರವಾಗಿದೆಯಂತೆ. ಇದನ್ನೂ ಓದಿ: ಚಾಮುಂಡಿ ತಾಯಿ ದರ್ಶನ ಪಡೆದ ಕಿಚ್ಚ ಸುದೀಪ್
ಇನ್ನು ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ನಟಿ ಅದ್ವಿತಿ ಶೆಟ್ಟಿ (Advithi Shetty) ತೆರೆಹಂಚಿಕೊಂಡಿದ್ದಾರೆ. ಈ ಸಿನಿಮಾ ಅದ್ವಿತಿಗೆ ಮೊದಲ ತುಳು ಸಿನಿಮಾವಾಗಿದ್ದು, ಅವರ ಮಾತೃಭಾಷೆ ತುಳು ಆಗಿದೆ ಎಂದಿದ್ದಾರೆ. ಈ ಸಿನಿಮಾದಲ್ಲಿ ಜರ್ನಲಿಸ್ಟ್ ಪಾತ್ರದಲ್ಲಿ ನಟಿ ಅದ್ವಿತಿ ಶೆಟ್ಟಿ ನಟಿಸಿದ್ದಾರಂತೆ. ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ಚಿತ್ರಕ್ಕೆ ಬಂಡವಾಳ ಹೂಡಿದ್ದು, ದೀಕ್ಷಿತ್ ಸಹ ನಿರ್ಮಾಪಕರಾಗಿದ್ದಾರೆ.
ಜೈ ಸಿನಿಮಾದ ಚಿತ್ರಕಥೆಯನ್ನ ರೂಪೇಶ್ ಶೆಟ್ಟಿ ಹಾಗೂ ವೇಣು ಹಸ್ರಳ್ಳಿ ಅವರು ಬರೆದಿದ್ದಾರೆ. ಮೂರು ಹಂತದಲ್ಲಿ ಚಿತ್ರೀಕರಣ ಮುಗಿಸಿದ `ಜೈ’ ಸಿನಿಮಾದಲ್ಲಿ ನಾಯಕನಾಗಿ ರೂಪೇಶ್ ಶೆಟ್ಟಿ ಮತ್ತು ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ. ಉಳಿದಂತೆ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಮೊದಲಾದವರು ಅಭಿನಯಿಸಿದ್ದಾರೆ.