ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿತ್ರೋದ್ಯಮದ ಹಿರಿಯ ನಟ ಶ್ರೀನಾಥ್ (Srinath), ನಟಿ ಪದ್ಮಾ ವಾಸಂತಿ (Padma Vasanthi), ನಟ ಸುಂದರಾಜ್, ಪ್ರಮೀಳಾ ಜೋಷಾಯಿ ಸೇರಿದಂತೆ ಹಲವರು ಲೀಲಾವತಿ ಅವರ ನಿವಾಸಕ್ಕೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.
Advertisement
ಎರಡು ತಿಂಗಳು ಹಿಂದೆಯಷ್ಟೇ ನಟಿಯರಾದ ಶ್ರುತಿ ಸೇರಿದಂತೆ ಹಲವರು ಲೀಲಾವತಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು. ಇದೀಗ ಶ್ರೀನಾಥ್ ಮತ್ತು ತಂಡ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಕೆಲ ಸಮಯ ಕಳೆದಿದೆ. ಹಳೆಯ ದಿನಗಳನ್ನು ಅವರೊಂದಿಗೆ ಮೆಲುಕು ಹಾಕಿದೆ. ಇದನ್ನೂ ಓದಿ: ಸೀರೆಯುಟ್ಟು ಮಿಂಚಿದ `ವಜ್ರಕಾಯ’ ನಟಿ ನಭಾ ನಟೇಶ್
Advertisement
Advertisement
ಸಿನಿಮಾ ರಂಗದಿಂದ ದೂರವಾದ ನಂತರ ಲೀಲಾವತಿ ಅವರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಊರಲ್ಲಿ ಆಸ್ಪತ್ರೆ ಕಟ್ಟಿಸಿದ್ದಾರೆ. ಅಲ್ಲದೇ, ರೈತರಿಗೆ ನಾನಾ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಲೀಲಾವತಿ ಅವರ ಜೊತೆ ಪುತ್ರ ವಿನೋದ್ ರಾಜ್ ಕುಮಾರ್ ಕೂಡ ಸಾಥ್ ನೀಡಿದ್ದಾರೆ.
Advertisement
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k