ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ (Max Film) ಚಿತ್ರದ ರಿಲೀಸ್‌ಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಇದರ ನಡುವೆ ನಟನ ಮುಂದಿನ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿರುವ ಲುಕ್ ಅನ್ನು ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:Bigg Boss 18: ಸ್ಪರ್ಧಿಯಾಗಿ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟ ಕತ್ತೆ
ಸದ್ಯ ಸುದೀಪ್ (Sudeep) ಮುಂದಿನ ಸಿನಿಮಾಗಾಗಿ ತಯಾರಿ ಮಾಡಿಕೊಳ್ತಿದ್ದಾರೆ. ಅನೂಪ್ ಭಂಡಾರಿ ಜೊತೆ ಕೈಜೋಡಿಸಿದ್ದಾರೆ. ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಕಿಚ್ಚ ಜಿಮ್‌ನಲ್ಲಿ ಬೆವರು ಸುರಿಸುತ್ತಿದ್ದಾರೆ. ದೇಹ ದಂಡಿಸಿ ವರ್ಕೌಟ್ ಮಾಡುತ್ತಿದ್ದಾರೆ. ಹಾಗಾಗಿ ಸಿಕ್ಸ್ ಪ್ಯಾಕ್ ಮಾಡಿರುವ ಖಡಕ್ ಫೋಟೋವೊಂದನ್ನು ನಟ ಹಂಚಿಕೊಂಡಿದ್ದಾರೆ.
View this post on Instagram
ಸದ್ಯ ಸುದೀಪ್ ಅವರು ‘ಬಿಲ್ಲ ರಂಗ ಭಾಷಾ’ ಚಿತ್ರದ ತಯಾರಿ ನಡುವೆಯೇ ‘ಬಿಗ್ ಬಾಸ್ ಕನ್ನಡ 11’ರ ನಿರೂಪಣೆಯ ಹೊಣೆಯನ್ನು ಹೊತ್ತಿಕೊಂಡಿದ್ದಾರೆ.