ಜೆಪಿ ನಗರದ ನಿವಾಸದಲ್ಲಿ ನಟ ಸುದೀಪ್ ತಾಯಿ ಅಂತಿಮ ದರ್ಶನ

Public TV
1 Min Read
Kiccha Sudeep Mother Saroja 1

– ವಿಲ್ಸನ್ ಗಾರ್ಡನ್‌ನ ಚಿತಾಗಾರದಲ್ಲಿ ಅಂತ್ಯಸಂಸ್ಕಾರ

ಬೆಂಗಳೂರು: ಅನಾರೋಗ್ಯದಿಂದ ನಟ ಕಿಚ್ಚ ಸುದೀಪ್ (Kiccha Sudeep) ಅವರ ತಾಯಿ ಭಾನುವಾರ ಬೆಳಗ್ಗೆ ವಿಧಿವಶರಾಗಿದ್ದು, ಜೆಪಿ ನಗರದ (JP Nagar) ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜಯನಗರದ ಅಪೋಲೋ ಆಸ್ಪತ್ರೆಯಿಂದ ಸರೋಜಾ ಅವರ ಪಾರ್ಥಿವ ಶರೀರವನ್ನು ಅಂಬುಲೆನ್ಸ್ ಮೂಲಕ ಜೆಪಿ ನಗರದ ನಿವಾಸಕ್ಕೆ ತರಲಾಗಿದೆ. ಈ ವೇಳೆ ನಟ ಕಿಚ್ಚ ಸುದೀಪ್ ಅವರು ಕೂಡ ಅಂಬುಲೆನ್ಸ್‌ನಲ್ಲಿಯೇ ಮನೆಗೆ ತೆರಳಿದ್ದಾರೆ. ಮನೆ ಬಳಿ ಅಂತಿಮ ದರ್ಶನಕ್ಕೆ ಶಾಮಿಯಾನ ಹಾಕಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುದೀಪ್ ಮನೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದು, ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಇದನ್ನೂ ಓದಿ: ನಟ ಕಿಚ್ಚ ಸುದೀಪ್ ತಾಯಿ ನಿಧನ

ಅಭಿಮಾನಿಗಳು ಮನೆ ಬಳಿ ಜಮಾಯಿಸುವ ಹಿನ್ನೆಲೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಂತಿಮ ದರ್ಶನದ ಬಳಿಕ ಸಂಜೆ 5 ಗಂಟೆಗೆ ವಿಲ್ಸನ್ ಗಾರ್ಡನ್‌ನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

Share This Article