‘ಜೈಲರ್’ (Jailer) ನಟ ಸುನೀಲ್‌ಗೆ (Sunil) ಸೌತ್ ಸಿನಿ ಇಂಡಸ್ಟ್ರಿಯಲ್ಲಿ ಸಖತ್ ಬೇಡಿಕೆಯಿದೆ. 180ಕ್ಕೂ ಹೆಚ್ಚು ಸೌತ್ ಚಿತ್ರಗಳಲ್ಲಿ ನಟಿಸಿರುವ ಸುನೀಲ್ ಈಗ ಕನ್ನಡಕ್ಕೆ ಎಂಟ್ರಿ ಕೊಡ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಟನೆಯ ಸಿನಿಮಾದಲ್ಲಿ ‘ಜೈಲರ್’ ನಟ ಕಾಣಿಸಿಕೊಳ್ಳುತ್ತಿದ್ದಾರೆ.
ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್‌ಗೆ ನಾಯಕಿಯಾಗಿ ಶ್ರುತಿ ಹರಿಹರನ್ (Shruthi Hariharan) ನಟಿಸಲಿದ್ದಾರೆ. ಈ ಚಿತ್ರಕ್ಕೆ ಸುನೀಲ್ ಅವರು ಎಂಟ್ರಿ ಕೊಡುತ್ತಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಈ ಚಿತ್ರದ ಶೂಟಿಂಗ್ ಆರಂಭವಾಗಲಿದೆ.
ಪ್ರಜ್ವಲ್ (Prajwal Devaraj) ನಟನೆಯ ಹೆಸರಿಡದ ಚಿತ್ರದಲ್ಲಿ ಸುನೀಲ್ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟು ಕೊಟ್ಟಿಲ್ಲ. ಇದನ್ನೂ ಓದಿ:ಮತ್ತೆ ಆಸ್ಪತ್ರೆಗೆ ದಾಖಲಾದ ನಟಿ ಸಮಂತಾ
ಸುದೀಪ್ ನಟನೆಯ ‘ಮ್ಯಾಕ್ಸ್’ (Max) ಚಿತ್ರದಲ್ಲಿ ಸುನೀಲ್ ನಟಿಸಲಿದ್ದಾರೆ ಎಂಬ ಸುದ್ದಿಯಿದೆ. ಈ ಬಗ್ಗೆ ಅಧಿಕೃತ ಅಪ್‌ಡೇಟ್ ಹೊರಬೀಳಬೇಕಿದೆ.