ಬೆಂಗಳೂರು: ಹೃದಯಾಘಾತದಿಂದಾಗಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಲಿವುಡ್ ನಟ ನಂದಮೂರಿ ತಾರಕ ರತ್ನ(39) ಅವರು ಕೊನೆಯುಸಿರೆಳೆದಿದ್ದಾರೆ.
ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ (Nandamuri Tarak Ratna) ಅವರಿಗೆ ಜ.29ರಂದು ಪಾದಯಾತ್ರೆ ವೇಳೆ ತೀವ್ರ ಹೃದಯಾಘಾತವಾಗಿತ್ತು. (Heart Attack) ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.
Advertisement
Advertisement
ಯಶಸ್ವಿಯಾಗಿ ಆಂಜಿಯೋಗ್ರಾಮ್ (Angiogram) ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿತ್ತು. ಆದರೂ ಕಳೆದ 23 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಜೊತೆಗೆ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಇಂದು ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶಿವಣ್ಣ ನಟನೆಯ ‘ಭೈರತಿ ರಣಗಲ್’ ಸಿನಿಮಾ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್
Advertisement
ತಾರಕರತ್ನ ನಿಧನದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೇ ಪೊಲೀಸ್ ಭದ್ರತೆಯಲ್ಲಿ ಹೈದರಾಬಾದ್ ಆಸ್ಪತ್ರೆಗೆ ನಟ ತಾರಕ ರತ್ನ ಶಿಫ್ಟ್ ಮಾಡಿದ್ದಾರೆ. ಇದನ್ನೂ ಓದಿ: ಮಾ.19ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ‘ವಿರಾಟಪುರ ವಿರಾಗಿ’ ಚಿತ್ರ ಪ್ರದರ್ಶನ
Advertisement
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k